ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಬೇಕು, ಆರೆಸ್ಸೆಸ್ ಮುಖಂಡ ಗುರುಮೂರ್ತಿ

ಸಾಮಾಜಿಕ ಮಾಧ್ಯಮ ವ್ಯವಸ್ಥೆ ಅರಾಜಕ ಶಕ್ತಿಯಾಗಿದ್ದು, ಅದನ್ನು ನಿಷೇಧಿಸುವ ಅಗತ್ಯವಿದೆ ಎಂದು ಆರೆಸ್ಸೆಸ್ ವಿಚಾರವಾದಿ ಎಸ್ ಗುರುಮೂರ್ತಿ ಹೇಳಿದ್ದಾರೆ.

ನವದೆಹಲಿ : ಸಾಮಾಜಿಕ ಮಾಧ್ಯಮ ವ್ಯವಸ್ಥೆ ಅರಾಜಕ ಶಕ್ತಿಯಾಗಿದ್ದು, ಅದನ್ನು ನಿಷೇಧಿಸುವ ಅಗತ್ಯವಿದೆ ಎಂದು ಆರೆಸ್ಸೆಸ್ ವಿಚಾರವಾದಿ ಎಸ್ ಗುರುಮೂರ್ತಿ ಹೇಳಿದ್ದಾರೆ. ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಿಮಿತ್ತ ಮಂಗಳವಾರ ದೆಹಲಿಯಲ್ಲಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಸಾಮಾಜಿಕ ಜಾಲತಾಣಗಳು ಅಡ್ಡಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಗುರುಮೂರ್ತಿ ಅವರ ಮಾತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪರಿಷತ್ತಿನ ಹಲವು ಹಿರಿಯ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಾಮಾಜಿಕ ಮಾಧ್ಯಮಗಳು ಅನೇಕ ಸಕಾರಾತ್ಮಕ ಅಂಶಗಳನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.