Youth Congress Protest: ಜಿಗ್ನೇಶ್ ಮೇವಾನಿ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
Youth Congress Protest: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿತು.
ನವದೆಹಲಿ (Delhi): ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ (Jignesh Mevani) ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ (Youth Congress Protest) ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿತು.
ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ”ಶಾಸಕ ಜಿಗ್ನೇಶ್ ಮೇವಾನಿ ಬಂಧನ ಅಕ್ರಮವಾಗಿದೆ. ಅಂತಹ ಯಾವುದೇ ಬಂಧನದ ಬಗ್ಗೆ ಗುಜರಾತ್ ವಿಧಾನಸಭೆಯ ಸ್ಪೀಕರ್ಗೆ ಇತರ ರಾಜ್ಯಗಳ ಪೊಲೀಸರು ಮಾಹಿತಿ ನೀಡಬೇಕಾಗಿದೆ, ಆದರೆ ಅವರಿಗೆ ಯಾರಿಂದಲೂ ಮಾಹಿತಿ ನೀಡಲಾಗಿಲ್ಲ, ಇದು ನಿಯಮಗಳಿಗೆ ವಿರುದ್ಧವಾಗಿದೆ.
ಮೇವಾನಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದರು. ಭಾರತೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ರಾಹುಲ್ ರಾವ್, ಮೇವಾನಿ ಬಂಧನವನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದರು, ದೆಹಲಿ ಪೊಲೀಸರು ಅವರನ್ನು ತಡೆದು ವಶಕ್ಕೆ ತೆಗೆದುಕೊಂಡರು.
ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ದಾಖಲಿಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂನ ಬಾರ್ಪೇಟಾ ಜಿಲ್ಲೆಯ ನ್ಯಾಯಾಲಯವು ಮಂಗಳವಾರ ಜಿಗ್ನೇಶ್ ಮೇವಾನಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಕೊಕ್ರಜಾರ್ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣದಲ್ಲಿ ಮೇವಾನಿ ಅವರನ್ನು ಸೋಮವಾರ ಬಂಧಿಸಲಾಯಿತು.
Follow Us on : Google News | Facebook | Twitter | YouTube