ಗುಜರಾತ್ನ ಮೋರ್ಬಿಯಲ್ಲಿ ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಸಾವು
ಗುಜರಾತ್ನ ಮೊರ್ಬಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹಳವಾಡದ ಸಾಗರ್ ಉಪ್ಪಿನ ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಅಹಮದಾಬಾದ್: ಗುಜರಾತ್ನ (Gujarat) ಮೊರ್ಬಿ ಜಿಲ್ಲೆಯಲ್ಲಿ (Morbi In Gujarat) ಭೀಕರ ಅಪಘಾತ ಸಂಭವಿಸಿದೆ. ಹಳವಾಡದ ಸಾಗರ್ ಉಪ್ಪಿನ ಕಾರ್ಖಾನೆಯ ಗೋಡೆ ಕುಸಿದು (Factory Wall Collapses ) 12 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವಾರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಯಿತು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅವಶೇಷಗಳ ತೆಗೆಯುವಿಕೆ ಮುಂದುವರಿದಿದೆ. ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳುವುದಾಗಿ ಗುಜರಾತ್ ಸಚಿವ ಬ್ರಿಜೇಶ್ ಮೆರ್ಜಾ ಹೇಳಿದ್ದಾರೆ.
ಪ್ರಧಾನಿ ಮೋದಿ ತೀವ್ರ ಸಂತಾಪ
ಉಪ್ಪಿನ ಕಾರ್ಖಾನೆ ಗೋಡೆ ಕುಸಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. 2 ಲಕ್ಷ ರೂ. ದಿಂದ 50,000 ಪರಿಹಾರ ನೀಡುವುದಾಗಿ ಘೋಷಿಸಿದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಆದೇಶಿಸಲಾಗಿದೆ.
12 Labourers Die As Factory Wall Collapses In Morbi In Gujarat
Gujarat | At least 12 people died after a wall of a salt factory in Morbi's Halvad GIDC collapsed
12 people have died after an incident happened at Sagar Salt Factory in Halvad GIDC. Government stands with the families of the deceased: State Minister Brijesh Merja pic.twitter.com/lSBAaw2jJB
— ANI (@ANI) May 18, 2022
Follow Us on : Google News | Facebook | Twitter | YouTube