ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ !
ಏರ್ ಇಂಡಿಯಾ ವಿಮಾನವೊಂದು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಮುಂಬೈ: ಏರ್ ಇಂಡಿಯಾ ವಿಮಾನವೊಂದು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇಂಜಿನ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ನಿಲ್ದಾಣಕ್ಕೆ ಮರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಟಾಗ್ರೂಪ್ ಎ320 ನಿಯೋ ವಿಮಾನವು ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 9.43ಕ್ಕೆ ಚೆನ್ನೈಗೆ ಹೊರಟಿತ್ತು. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಎಂಜಿನ್ ನಿಂತಿತು. ಎಚ್ಚೆತ್ತ ಪೈಲಟ್ಗಳು ಬೆಳಗ್ಗೆ 10.10ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಿದರು ಎಂದು ಮೂಲಗಳು ತಿಳಿಸಿವೆ.
ತಾಂತ್ರಿಕ ಸಮಸ್ಯೆಯಿಂದ ವಿಮಾನ ಮಾರ್ಗ ಬದಲಿಸಿದ್ದರಿಂದ ಪ್ರಯಾಣಿಕರು ಗಾಬರಿಗೊಂಡರು. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗುತ್ತಿದ್ದಂತೆ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ನಂತರ ಮತ್ತೊಂದು ವಿಮಾನದಲ್ಲಿ ಪ್ರಯಾಣಿಕರನ್ನು ಬೆಂಗಳೂರಿಗೆ ಕರೆತರಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಈ ಘಟನೆಯ ಕುರಿತು ವಿಮಾನಯಾನ ನಿಯಂತ್ರಕದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಏರ್ ಇಂಡಿಯಾದ ವಕ್ತಾರರು, “ಏರ್ ಇಂಡಿಯಾ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ, ಸಿಬ್ಬಂದಿ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ನುರಿತರಾಗಿದ್ದಾರೆ ಮತ್ತು ಎಂಜಿನಿಯರಿಂಗ್ ಮತ್ತು ನಿರ್ವಹಣಾ ತಂಡಗಳು ಸಮಸ್ಯೆಯನ್ನು ಪರಿಶೀಲಿಸುತ್ತಿವೆ” ಎಂದು ಹೇಳಿದರು.
Air India Flight Makes Emergency Landing At Mumbai Airport After Engine Shuts Mid Air
Follow Us on : Google News | Facebook | Twitter | YouTube