ಬಾರಾಮುಲ್ಲಾ ವೈನ್ ಶಾಪ್ ಮೇಲೆ ಉಗ್ರರ ದಾಳಿ: ಐವರ ಬಂಧನ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ (Baramulla) ಮದ್ಯದಂಗಡಿ ಮೇಲೆ ದಾಳಿ ಮಾಡಿದ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ (Baramulla) ಮದ್ಯದಂಗಡಿ ಮೇಲೆ ದಾಳಿ ಮಾಡಿದ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯಲ್ಲಿ ಭಾಗಿಯಾಗಿದ್ದ ಇತರ ನಾಲ್ವರು ಉಗ್ರರೊಂದಿಗೆ ಲಷ್ಕರ್-ಎ-ತೊಯ್ಬಾ ವ್ಯಕ್ತಿಯನ್ನು ಬಂಧಿಸಲಾಗಿದೆ.
ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಬಾರಾಮುಲ್ಲಾದಲ್ಲಿ ಹೊಸದಾಗಿ ತೆರೆಯಲಾಗಿದ್ದ ವೈನ್ ಶಾಪ್ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮದ್ಯದಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದು, ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ದಾಳಿ ನಡೆಸಿದ ಉಗ್ರರನ್ನು ಬಂಧಿಸಲಾಗಿದೆ ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಅವರಿಂದ ಐದು ಬಂದೂಕುಗಳು, 23 ಗ್ರೆನೇಡ್ಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರು ಹಲವು ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
Five Arrested For Terror Attack On Baramulla Wine Shop
Follow Us on : Google News | Facebook | Twitter | YouTube