ಹರಿಯಾಣದಲ್ಲಿ ಬಿಜೆಪಿ ಮುಖಂಡ ತಜೀಂದರ್ ಬಂಧನ

ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಪಂಜಾಬ್ ಪೊಲೀಸರು ಇಂದು ದೆಹಲಿಯಲ್ಲಿ ಬಂಧಿಸಿದ್ದಾರೆ. 

ನವದೆಹಲಿ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಪಂಜಾಬ್ ಪೊಲೀಸರು ಇಂದು ದೆಹಲಿಯಲ್ಲಿ ಬಂಧಿಸಿದ್ದಾರೆ. ಮೊಹಾಲಿಯ ಸೈಬರ್ ಸೆಲ್‌ನಲ್ಲಿ ನೀಡಿದ ದೂರಿನ ಆಧಾರದ ಮೇಲೆ ದೆಹಲಿಯಲ್ಲಿ ಅವರನ್ನು ಬಂಧಿಸಲಾಯಿತು.

ಬಿಜೆವೈಎಂ ರಾಷ್ಟ್ರೀಯ ಕಾರ್ಯದರ್ಶಿ ತಜೀಂದರ್ ವಿರುದ್ಧ ವಿರೋಧ ಪಕ್ಷದ ನಾಯಕ ಸನ್ನಿ ಸಿಂಗ್ ದೂರು ದಾಖಲಿಸಿದ್ದಾರೆ. ತಜೀಂದರ್ ದ್ವೇಷದ ಭಾಷಣಗಳನ್ನು ಮಾಡಿದ್ದಾರೆ, ಸುಳ್ಳುಗಳನ್ನು ಹರಡಿದ್ದಾರೆ ಮತ್ತು ಮಾರಣಾಂತಿಕ ಘರ್ಷಣೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮಾರ್ಚ್ 30 ರಂದು ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ತಜಿಂದರ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕಿದ್ದರು ಎಂದು ತಿಳಿದುಬಂದಿದೆ.

ಬೆದರಿಕೆಯ ವಿಡಿಯೋಗಳನ್ನು ಪೊಲೀಸರಿಗೆ ಸಲ್ಲಿಸಲಾಗಿದೆ. ತಜೀಂದರ್ ಬಂಧನವನ್ನು ಬಿಜೆಪಿ ಖಂಡಿಸಿದೆ. ಪಂಜಾಬ್ ನಲ್ಲಿ ರಾಜಕೀಯ ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕಲು ದೆಹಲಿ ಸಿಎಂ ಕೇಜ್ರಿವಾಲ್ ಮುಂದಾಗುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಹೇಳಿದೆ.

Punjab Police Arrested Tajinder Pal Singh Bagga But Haryana Cops Stops Convoy

Follow Us on : Google News | Facebook | Twitter | YouTube