ಅಪಾರ್ಟ್ಮೆಂಟ್ನಲ್ಲಿ ಭೀಕರ ಅಗ್ನಿ ಅವಘಡ – 7 ಮಂದಿ ಸಜೀವ ದಹನ
ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಏಳು ಮಂದಿ ಸಜೀವ ದಹನವಾಗಿದ್ದಾರೆ.
ಭೋಪಾಲ್: ಸ್ವರ್ಣ ಬಕ್ ಕಾಲೋನಿ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿರುವ ಎರಡು ಅಂತಸ್ತಿನ ಅಪಾರ್ಟ್ಮೆಂಟ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಈ ಅಪಾರ್ಟ್ಮೆಂಟ್ನಲ್ಲಿ ಹಲವು ಕುಟುಂಬಗಳು ವಾಸಿಸುತ್ತಿವೆ.
ಈ ವೇಳೆ ಇಂದು ಬೆಳಗ್ಗೆ ಅಪಾರ್ಟ್ಮೆಂಟ್ನಲ್ಲಿರುವ ಮನೆಯೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಇದು ಅಪಾರ್ಟ್ಮೆಂಟ್ನ ಇತರ ಮನೆಗಳಿಗೂ ವ್ಯಾಪಿಸಿದೆ. ಅಪಾರ್ಟ್ಮೆಂಟ್ನ ಹಲವು ನಿವಾಸಿಗಳು ಬೆಂಕಿಗೆ ಸಿಲುಕಿದ್ದಾರೆ. ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳಿಗೆ ಬೆಂಕಿಯ ಬಗ್ಗೆ ಮಾಹಿತಿ ನೀಡಲಾಯಿತು. ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಟ್ಟಡದೊಳಗೆ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ.
ಈ ಪೈಕಿ ಅಪಾರ್ಟ್ಮೆಂಟ್ನಲ್ಲಿ ಸಿಲುಕಿದ್ದ 9 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ, ಬೆಂಕಿಯಲ್ಲಿ 7 ಮಂದಿ ಸಜೀವ ದಹನವಾಗಿದ್ದರು. ಬೆಂಕಿ ಅವಘಡದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Seven people were burnt to death in a terrible fire that broke out in an apartment building
Follow Us on : Google News | Facebook | Twitter | YouTube