ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಈ ವೇಳೆ ಇಂದು ಭಯೋತ್ಪಾದಕರು ಹಾಗೂ ಯೋಧರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಈ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಯಿತು ಎಂದು ಆರಂಭದಲ್ಲಿ ವರದಿಯಾಗಿದೆ.
ಈ ವೇಳೆ ಮತ್ತೊಬ್ಬ ಭಯೋತ್ಪಾದಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದರಿಂದಾಗಿ ಇಲ್ಲಿಯವರೆಗೆ ಒಟ್ಟು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರಿಗಾಗಿ ಶೋಧ ಮುಂದುವರಿದಿದೆ ಎಂದು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
TRENDING ARTICLES1 / 5
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story



