Kashmir Files Film: ‘ಕಾಶ್ಮೀರ್ ಫೈಲ್ಸ್’ ನಿರ್ದೇಶಕರಿಗೆ ವೈ ಕೆಟಗರಿ ಭದ್ರತೆ
Kashmir Files Film : ‘ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರ್ಕಾರ ಭದ್ರತೆ ಹೆಚ್ಚಿಸಿದೆ.
ನವದೆಹಲಿ: ‘ಕಾಶ್ಮೀರ್ ಫೈಲ್ಸ್’ (Kashmir Files Film) ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರ್ಕಾರ ಭದ್ರತೆ ಹೆಚ್ಚಿಸಿದೆ. ಅವರಿಗೆ ‘ವೈ’ ಕೆಟಗರಿ ಭದ್ರತೆ ಹಾಗೂ ಸಿಆರ್ಪಿಎಫ್ ಕಮಾಂಡೋ ಭದ್ರತೆಯನ್ನು ನೀಡಲಾಗಿತ್ತು.
ಚಿತ್ರ ಬಿಡುಗಡೆ ಬಳಿಕ ಅವರಿಗೆ ಬೆದರಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭಯೋತ್ಪಾದನೆಯಿಂದಾಗಿ ಕಾಶ್ಮೀರಿ ಪಂಡಿತರು ಕಾಶ್ಮೀರ ಕಣಿವೆಯಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ಅಗ್ನಿಹೋತ್ರಿ ಅವರ ‘ಕಾಶ್ಮೀರ ಫೈಲ್ಸ್’ ಇತ್ತೀಚೆಗೆ ಬಿಡುಗಡೆಯಾಯಿತು.
Follow Us on : Google News | Facebook | Twitter | YouTube