ವಾಯು ಮಾಲಿನ್ಯ : ದೆಹಲಿಯಲ್ಲಿ ಶಾಲೆಗಳು ಮತ್ತೆ ಕ್ಲೋಸ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಮಾಲಿನ್ಯದ ಕುರಿತು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸರ್ಕಾರಗಳ ಧೋರಣೆ ವಿರುದ್ಧ ಕಿಡಿಕಾರಿದೆ. ಈ ನಡುವೆ ಈ ಆದೇಶದಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಮಾಲಿನ್ಯದ ಕುರಿತು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸರ್ಕಾರಗಳ ಧೋರಣೆ ವಿರುದ್ಧ ಕಿಡಿಕಾರಿದೆ. ಈ ನಡುವೆ ಈ ಆದೇಶದಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ.

ಮುಂದಿನ ಆದೇಶದವರೆಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ. ದೆಹಲಿಯಲ್ಲಿ ವಾಯು ಮಾಲಿನ್ಯದಲ್ಲಿ ಯಾವುದೇ ಸುಧಾರಣೆಯಾಗಿಲ್ಲ, ಈ ಕಾರಣಕ್ಕಾಗಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲೆಗಳನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಎಲ್ಲಾ ಸರ್ಕಾರಿ, ಮಾನ್ಯತೆ ಪಡೆದ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC), ಮುನ್ಸಿಪಲ್ ಕಾರ್ಪೊರೇಷನ್, ದೆಹಲಿ ಕಂಟೋನ್ಮೆಂಟ್ ಬೋರ್ಡ್‌ನಲ್ಲಿರುವ ಎಲ್ಲಾ ಶಾಲೆಗಳನ್ನು ಮುಚ್ಚಲು ಆದೇಶಿಸಿದೆ. ತೀವ್ರ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

ಮಾಲಿನ್ಯದಿಂದಾಗಿ ದೆಹಲಿಯಲ್ಲಿ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಮಂಡಳಿಯ ಪರೀಕ್ಷೆಗಳನ್ನು ಪೂರ್ವನಿರ್ಧರಿತ ವೇಳಾಪಟ್ಟಿಯಂತೆ ನಡೆಸಲಾಗುವುದು.

ದೆಹಲಿಯ ಜೊತೆಗೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ವಾಯು ಮಾಲಿನ್ಯ ಕಡಿಮೆಯಾಗಿಲ್ಲ. ಕಳೆದ ಎರಡ್ಮೂರು ದಿನಗಳಿಂದ ಕೊಂಚ ಸುಧಾರಿಸಿದ್ದ ಗಾಳಿಯ ಗುಣಮಟ್ಟ ಮತ್ತೆ ಹದಗೆಟ್ಟು ತೀವ್ರ ಮಟ್ಟ ತಲುಪಿದೆ. ಗುರುವಾರ ಬೆಳಗ್ಗೆ 9 ಗಂಟೆಗೆ ದೆಹಲಿಯ ಆನಂದ್ ವಿಹಾರ್ ಐಎಸ್‌ಬಿಟಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ತೀವ್ರ ವಿಭಾಗದಲ್ಲಿ 448 ಆಗಿತ್ತು. ಚಳಿಗಾಲದ ಹಿನ್ನೆಲೆಯಲ್ಲಿ ಮಂಜು ಶೇಖರಣೆಯಾಗಿತ್ತು. ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.

Stay updated with us for all News in Kannada at Facebook | Twitter
Scroll Down To More News Today