Welcome To Kannada News Today

ಪ್ರೊ. ಕೆ.ಎಸ್.ನಿಸಾರ್ ಅಹಮದ್ ನಿಧನ, ಕವಿ ನಿಸಾರ್ ಅಹಮದ್ ಇನ್ನಿಲ್ಲ

ನಿತ್ಯೋತ್ಸವ ಕವಿ ನಿಸಾರ್ ಅಹಮದ್ (84) ನಿಧನ, ಕವಿ ನಿಸಾರ್ ಅಹಮದ್ ವಿಧಿವಶ

🌐 Kannada News :

ಬೆಂಗಳೂರು : ನಿತ್ಯೋತ್ಸವ ಕವಿ ನಿಸಾರ್ ಅಹಮದ್ ರವರು (84) ಪದ್ಮನಾಭಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಕೆಲ ಸಮಯ ಆಸ್ಪತ್ರೆಗೂ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅಮೆರಿಕದಲ್ಲಿದ್ದ ಅವರ ಪುತ್ರ ಇತ್ತೀಚೆಗಷ್ಟೇ ಮೃತಪಟ್ಟಿದ್ದರು.

‘ಜೋಗದ ಸಿರಿ ಬೆಳಕಿನಲ್ಲಿ…’ ನಿಸಾರ್ ಅಹಮದ್ ಅವರ ಜನಪ್ರಿಯ ಕೃತಿ. ಮನೆಮನೆ ತಲುಪಿದ ಈ ಕೃತಿ ಅವರಿಗೆ ಸಾಕಷ್ಟು ಜನಮನ್ನಣೆಯನ್ನೂ ತಂದುಕೊಟ್ಟಿತ್ತು. ಜನರು ಅವರನ್ನು ಪ್ರೀತಿಯಿಂದ ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಎಂದೇ ಗುರುತಿಸಿದರು.

ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರ ಪೂರ್ಣ ಹೆಸರು ಕೊಕ್ಕರೆ ಹೊಸಳ್ಳಿ ಶೇಖ್ ಹೈದರ ನಿಸಾರ್ ಅಹಮದ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಫೆಬ್ರುವರಿ 5, 1936ರಲ್ಲಿ ಜನಿಸಿದರು. 1959ರಲ್ಲಿ ಭೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರವರೆಗೆ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗೂ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.

10ನೇ ವಯಸ್ಸಿನಲ್ಲೇ ಸಾಹಿತ್ಯದ ಮೇಲೆ ಆಸಕ್ತಿ ಹೊಂದಿದ್ದ ಕವಿಗೆ ರಾಜ್ಯೋತ್ಸವ, ನಾಡೋಜ, ಪದ್ಮಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಒಲಿದು ಬಂದಿದೆ. 1974ರಲ್ಲಿ ಪ್ರಕಟವಾದ ‘ನಿತ್ಯೋತ್ಸವ’ ಕವನ ಸಂಕಲನ ನಿಸಾರ್ ಅವರಿಗೆ ಬಹಳ ಜನಪ್ರಿಯತೆ ತಂದು ಕೊಟ್ಟಿತು.

1981 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ , 2008 ರಲ್ಲಿ ಪ್ರದ್ಮಶ್ರೀ ಪ್ರಶಸ್ತಿ ಸೇರಿದಂತೆ ತಮ್ಮ ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು. ಭಾನುವಾರ ಮಧ್ಯಾಹ್ಮ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಪ್ರೊ. ಕೆ.ಎಸ್.ನಿಸಾರ್ ಅಹಮದ್ ನಿಧನ, ಕವಿ ನಿಸಾರ್ ಅಹಮದ್ ಇನ್ನಿಲ್ಲ……..

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.