ಕುಲ್ಗಾಮ್ನಲ್ಲಿ ಎನ್ಕೌಂಟರ್, ಇಬ್ಬರು ಬಂದೂಕುಧಾರಿಗಳ ಕೊಂದ ಸೇನೆ
ಕುಲ್ಗಾಮ್ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ನಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ ನಡೆದಿದೆ. ಪಟ್ ಅಖಿರನ್ ಮೀರ್ ಬಜಾರ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ. ಭಯೋತ್ಪಾದಕರ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಅಲ್ಲಿಗೆ ತಲುಪಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
ಈ ಸಂದರ್ಭದಲ್ಲಿ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು. ಇದುವರೆಗೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ನಡೆಯುತ್ತಿದೆ. ಮೊದಲ ತಂಡ ಜಮ್ಮುವಿನಿಂದ ಹಿಮಲಿಂಗದ ದರ್ಶನಕ್ಕೆ ಹೊರಟಿತು. ಪ್ರವಾಸದ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
Kulgam Encounter Two Terrorists Killed By Security Forces
Follow Us on : Google News | Facebook | Twitter | YouTube