ಲಖಿಂಪುರ ಖೇರಿ ಹಿಂಸಾಚಾರ; ಆಶಿಶ್ ಮಿಶ್ರಾ ಜಾಮೀನು ತಿರಸ್ಕಾರ
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಮಂಗಳವಾರ ತಿರಸ್ಕರಿಸಿದೆ.
ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಮಂಗಳವಾರ ತಿರಸ್ಕರಿಸಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು.
ಜುಲೈ 15 ರಂದು ವಾದವನ್ನು ಮುಕ್ತಾಯಗೊಳಿಸಿದ ನಂತರ ನ್ಯಾಯಾಲಯವು ಆಶಿಶ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು. ದೇಶಾದ್ಯಂತ ಸಂಚಲನ ಮೂಡಿಸಿ ಪ್ರತಿಭಟನಾ ನಿರತ ರೈತರ ಮೇಲೆ ಎಸ್ ಯುವಿ ವಾಹನ ಹರಿದ ನಂತರ ಉಂಟಾದ ಗಲಭೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಮತ್ತು ನಾಲ್ವರು ರೈತರು ಸೇರಿದ್ದಾರೆ.
lakhimpur kheri violence case ashish mishra’s bail rejected
Follow us On
Google News |
Advertisement