Lakhimpur Kheri, ಲಖಿಂಪುರ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವರ ವಿರುದ್ಧದ ಅರ್ಜಿ ವಜಾ

ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದೆ. 

ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದೆ. ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 14 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಕೋರಿ ಲಖೀಂಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದ ಪತ್ರಕರ್ತನ ಸಹೋದರ ಅರ್ಜಿ ಸಲ್ಲಿಸಿದ್ದಾರೆ.

ಹಿಂಸಾಚಾರದ ಕುರಿತು ಈಗಾಗಲೇ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಪ್ರತ್ಯೇಕ ಅರ್ಜಿ ಅಗತ್ಯವಿಲ್ಲ ಎಂದು ಪರಿಗಣಿಸಿ ಈ ನಿರ್ಧಾರ ಕೈಗೊಂಡಿದೆ. ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದರು.

Stay updated with us for all News in Kannada at Facebook | Twitter
Scroll Down To More News Today