Lalu Prasad Yadav ಲಾಲು ಪ್ರಸಾದ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕ
Lalu Prasad Yadav health condition: ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕ
ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ಆರೋಗ್ಯ ಸ್ಥಿತಿ (health condition) ಚಿಂತಾಜನಕವಾಗಿದೆ. ಇಂದು ಸಂಜೆ ಲಾಲು ಪ್ರಸಾದ್ ಯಾದವ್ ಅವರನ್ನು ಪಾಟ್ನಾದಿಂದ ದೆಹಲಿಯ ಏಮ್ಸ್‌ಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಕಳೆದ ವಾರ ಲಾಲು ಮನೆಯ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಬಿದ್ದಿದ್ದರು. ತುರ್ತು ಚಿಕಿತ್ಸೆಗಾಗಿ ಅವರನ್ನು ಪಾಟ್ನಾದ ಪಾರಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಲಾಲು ಅವರ ಭುಜ ಮತ್ತು ಬೆನ್ನುಮೂಳೆಗೆ ತೀವ್ರ ಪೆಟ್ಟಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಸಿಎಂ ನಿತೀಶ್ ಕುಮಾರ್ ಇಂದು ಲಾಲು ಅವರೊಂದಿಗೆ ಸಮಾಲೋಚನೆ ನಡೆಸಿದರು.
ಈಗಾಗಲೇ ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಲಾಲು ಅವರ ಆರೋಗ್ಯ ಬುಧವಾರ ಬೆಳಗಿನ ವೇಳೆಗೆ ಮತ್ತಷ್ಟು ಹದಗೆಟ್ಟಿದೆ. ಇದರೊಂದಿಗೆ ಏರ್ ಆಂಬ್ಯುಲೆನ್ಸ್ ಮೂಲಕ ದೆಹಲಿಯ ಏಮ್ಸ್ ಗೆ ಸ್ಥಳಾಂತರಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಲಾಲು ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಲಾಲು ಪುತ್ರ ತೇಜಸ್ವಿ ಯಾದವ್‌ಗೆ ಮೋದಿ ಕರೆ ಮಾಡಿದ್ದಾರೆ. ಆರ್‌ಜೆಡಿ ಮುಖ್ಯಸ್ಥರು ಶೀಘ್ರ ಗುಣಮುಖರಾಗಲಿ ಎಂದು ಮೋದಿ ಹಾರೈಸಿದ್ದಾರೆ.
Lalu Prasad Yadav health condition is critical
Follow us On
Google News |