ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು!
ಕಾಂಗ್ರೆಸ್ ಹಿರಿಯ ನಾಯಕಿ ಮತ್ತು ಆಡಳಿತಾರೂಢ ಯುಡಿಎಫ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priynaka Gandhi) ವಿರುದ್ಧ ಪ್ರತಿಪಕ್ಷ ಎಲ್‌ಡಿಎಫ್ ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
Priynaka Gandhi : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮತ್ತು ಆಡಳಿತಾರೂಢ ಯುಡಿಎಫ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರತಿಪಕ್ಷ ಎಲ್‌ಡಿಎಫ್ ಮಂಗಳವಾರ ಚುನಾವಣಾ ಆಯೋಗಕ್ಕೆ (Election commission) ದೂರು ಸಲ್ಲಿಸಿದೆ.
ಚುನಾವಣಾ ಪ್ರಚಾರಕ್ಕಾಗಿ ಧಾರ್ಮಿಕ ಸ್ಥಳಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಕಾಂಗ್ರೆಸ್ ಪಕ್ಷವು ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಎಲ್‌ಡಿಎಫ್ ವಯನಾಡ್ ಸಂಸದೀಯ ಸಮಿತಿ ಮಂಗಳವಾರ ತನ್ನ ದೂರಿನಲ್ಲಿ ತಿಳಿಸಿದೆ.
ನವೆಂಬರ್ 10 ರಂದು, ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಭಾಗವಾಗಿ, ಎಲ್‌ಡಿಎಫ್, ‘ಲೇಡಿ ಆಫ್ ಲೌರ್ಡ್ಸ್ ಚರ್ಚ್’ನಲ್ಲಿ ಪ್ರಿಯಾಂಕಾ ಗಾಂಧಿ ಪ್ರಾರ್ಥನೆ ಮಾಡುತ್ತಿರುವ ವೀಡಿಯೊಗಳು ಮತ್ತು ಫೋಟೋಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.
ಆ ಫೋಟೋಗಳು ಮತ್ತು ವಿಡಿಯೋಗಳಲ್ಲಿ ಶಾಸಕ, ಕೇರಳ ಪಿಸಿಸಿ ಕಾರ್ಯಾಧ್ಯಕ್ಷ ಟಿ ಸಿದ್ದಿಕಿ ಮತ್ತು ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಡಿ.ಅಪ್ಪಚನ್ ಕೂಡ ಇದ್ದಾರೆ.
Ldf Accuses Priyanka Gandhi Of Misusing Religious Places For Election Campaign