ಶಾಲೆಗೆ ನುಗ್ಗಿದ ಚಿರತೆ.. ವಿದ್ಯಾರ್ಥಿ ಮೇಲೆ ಹಲ್ಲೆ

ಶಾಲೆಯೊಂದರಲ್ಲಿ ಚಿರತೆ ತರಗತಿಯೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ, ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ವಿದ್ಯಾರ್ಥಿ ಪಾರಾಗಿದ್ದಾನೆ. ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ.

ಲಕ್ನೋ: ಶಾಲೆಯೊಂದರಲ್ಲಿ ಚಿರತೆ ತರಗತಿಯೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ, ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ವಿದ್ಯಾರ್ಥಿ ಪಾರಾಗಿದ್ದಾನೆ. ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ.

ಚಾರ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜಿನ ತರಗತಿಯೊಂದಕ್ಕೆ ಚಿರತೆಯೊಂದು ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ. ಇದರಿಂದ ತರಗತಿಯಲ್ಲಿದ್ದ ವಿದ್ಯಾರ್ಥಿಗಳೆಲ್ಲ ಹೊರಗೆ ಓಡಲು ಮುಂದಾದರು… ಈ ಸಂದರ್ಭದಲ್ಲಿ ಸ್ವಲ್ಪ ನೂಕುನುಗ್ಗಲು ಉಂಟಾಯಿತು.

ಇದೇ ವೇಳೆ ಚಿರತೆ ದಾಳಿಗೆ ಒಳಗಾದ ವಿದ್ಯಾರ್ಥಿಯ ಬೆನ್ನು ಹಾಗೂ ಕೈಗೆ ಗಾಯವಾಗಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿರತೆ ದಾಳಿಯ ಬಗ್ಗೆ ಶಾಲಾ ಆಡಳಿತ ಮಂಡಳಿ.. ಪೊಲೀಸರು ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಮಧ್ಯೆ ತರಗತಿಯಲ್ಲಿದ್ದ ಚಿರತೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Stay updated with us for all News in Kannada at Facebook | Twitter
Scroll Down To More News Today