ಯುವತಿಯ ಖಾಸಗಿ ಅಂಗದ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ

ಹರಿಯಾಣದ ಗುರುಗ್ರಾಮದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕ, ಮದುವೆ ವಿಚಾರವಾಗಿ ಉಂಟಾದ ವಾಗ್ವಾದದ ಬಳಿಕ ಪ್ರಿಯೆಯ ಖಾಸಗಿ ಅಂಗಗಳ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿ (Gurugram) ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಡೇಟಿಂಗ್ ಆಪ್ ಮೂಲಕ ಪರಿಚಯವಾಗಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದ ಜೋಡಿಯ ಮಧ್ಯೆ ಮದುವೆ ವಿಚಾರವಾಗಿ ಉಂಟಾದ ವಾಗ್ವಾದ ಹಿಂಸಾತ್ಮಕ ತಿರುವು ಪಡೆದುಕೊಂಡಿದೆ.

ತ್ರಿಪುರ ಮೂಲದ 19 ವರ್ಷದ ಯುವತಿ ಗುರುಗ್ರಾಮದಲ್ಲಿ ಬೈಯೋಟೆಕ್ನಾಲಜಿ ಅಭ್ಯಾಸ ಮಾಡುತ್ತಿದ್ದಳು. ಕಳೆದ ವರ್ಷ ಡೇಟಿಂಗ್ ಆಪ್‌ನಲ್ಲಿ ಶಿವಂ ಎಂಬ ಯುವಕನ ಪರಿಚಯವಾಗಿದ್ದು, ಆ ಪರಿಚಯ ನಂತರ ಪ್ರೇಮವಾಗಿ ಮಾರ್ಪಟ್ಟಿತ್ತು. ಇಬ್ಬರೂ ಸೆಕ್ಟರ್ 69ರಲ್ಲಿ ಬಾಡಿಗೆ ಫ್ಲಾಟ್‌ನಲ್ಲಿ ಒಟ್ಟಿಗೆ ವಾಸ ಆರಂಭಿಸಿದ್ದರು.

ಇತ್ತೀಚೆಗೆ ಮದುವೆ ವಿಷಯದಲ್ಲಿ ಉಂಟಾದ ಭಿನ್ನಾಭಿಪ್ರಾಯ ಗಂಭೀರ ರೂಪ ಪಡೆದಿದೆ. ಯುವತಿ ಮದುವೆಗಾಗಿ ಒತ್ತಾಯಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಆಕ್ರೋಶಗೊಂಡ ಯುವಕ ಆಕೆಯನ್ನು ಕೊಠಡಿಯಲ್ಲಿ ಬಂದಿಸಿ, ಖಾಸಗಿ ಅಂಗಗಳ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೂರು ದಿನಗಳ ಕಾಲ ಆಕೆಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದಾನೆ ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

ತೀವ್ರ ನೋವಿನ ನಡುವೆಯೇ ಯುವತಿ ತಾಯಿಗೆ ಕರೆ ಮಾಡಿ ಘಟನೆ ವಿವರಿಸಿದ್ದಾಳೆ. ತಕ್ಷಣವೇ ಪೊಲೀಸ್ ದೂರು ದಾಖಲಾಗಿ, ಪೊಲೀಸರು ಸ್ಥಳಕ್ಕೆ ತೆರಳಿ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಆಕೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರು ಆರೋಪಿ ಶಿವಂನನ್ನು ಬಂಧಿಸಿ, ಹತ್ಯಾಯತ್ನ ಹಾಗೂ ಇತರೆ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ವೈದ್ಯಕೀಯ ವರದಿ ಬಳಿಕ ಇನ್ನಷ್ಟು ವಿಧಿಗಳು ಸೇರಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TRENDING ARTICLES1 / 3
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories