ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಆರೋಗ್ಯ ಚೇತರಿಕೆ
ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (LK Advani) ಅವರ ಆರೋಗ್ಯ ಚೇತರಿಸಿದೆ ಎಂದು ದೆಹಲಿಯ ಇಂದ್ರಪ್ರಸ್ತ ಅಪೋಲೋ ಆಸ್ಪತ್ರೆ ಮಂಗಳವಾರ ಬುಲೆಟಿನ್ ಬಿಡುಗಡೆ ಮಾಡಿದೆ.
LK Advani : ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ (LK Advani Health Update: Condition Stable) ಎಂದು ದೆಹಲಿಯ ಇಂದ್ರಪ್ರಸ್ತ ಅಪೋಲೋ ಆಸ್ಪತ್ರೆ ಮಂಗಳವಾರ ಬುಲೆಟಿನ್ ಬಿಡುಗಡೆ ಮಾಡಿದೆ.
ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಒಂದು ಅಥವಾ ಎರಡು ದಿನಗಳಲ್ಲಿ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ಸ್ಥಳಾಂತರಿಸಲಾಗುವುದು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಖಚಿತಪಡಿಸಿದೆ. ಅಡ್ವಾಣಿ ಅವರು ಇದೇ ತಿಂಗಳ 12ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ಇದೇ ತಿಂಗಳ 12 ರಿಂದ ಡಾ.ವಿನೀತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರಮೇಣ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. “ಆರೋಗ್ಯ ಸ್ಥಿತಿಯನ್ನು ಅವಲಂಬಿಸಿ ನಾವು ಒಂದು ಅಥವಾ ಎರಡು ದಿನಗಳಲ್ಲಿ ಐಸಿಯುನಿಂದ ಸ್ಥಳಾಂತರಿಸುತ್ತೇವೆ” ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ಕಳೆದ ಆಗಸ್ಟ್‌ನಲ್ಲಿಯೂ ಅಡ್ವಾಣಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವರ್ಷದ ಆರಂಭದಲ್ಲಿ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು.
ಅಡ್ವಾಣಿಯವರು 8 ನವೆಂಬರ್ 1927 ರಂದು ಕರಾಚಿಯಲ್ಲಿ (ಈಗ ಪಾಕಿಸ್ತಾನ) ಜನಿಸಿದರು. 1942 ರಲ್ಲಿ ಸ್ವಯಂ ಸೇವಕರಾಗಿ ಆರ್ಎಸ್ಎಸ್ ಸೇರಿದರು. ಅಡ್ವಾಣಿ 1986-1990, 1993-98 ಮತ್ತು 2004-05ರ ನಡುವೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
LK Advani’s Health Stable, To Be Moved Out of ICU Soon, Says Hospital