ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ, ಏಳು ಮಂದಿ ಸಾವು

ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹತ್ತಾರು ಮಂದಿ ಗಾಯಗೊಂಡಿದ್ದಾರೆ.

- - - - - - - - - - - - - Story - - - - - - - - - - - - -

Fire Accident in Private Hospital : ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹತ್ತಾರು ಮಂದಿ ಗಾಯಗೊಂಡಿದ್ದಾರೆ. ದಿಂಡಿಗಲ್ ಜಿಲ್ಲೆಯ ಗಾಂಧಿನಗರ (Dindigul district of Tamil Nadu) ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಸಿಲುಕಿದ್ದ ರೋಗಿಗಳನ್ನು ರಕ್ಷಿಸಿ ಬೇರೆ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಹೊಗೆಯಿಂದ ಪ್ರಜ್ಞೆ ತಪ್ಪಿದ ಕೆಲ ಸಿಬ್ಬಂದಿಯನ್ನೂ ರಕ್ಷಿಸಿ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರಲ್ಲಿ ಓರ್ವ ಬಾಲಕ ಕೂಡ ಇದ್ದಾನೆ ಎಂದು ತಿಳಿದುಬಂದಿದೆ. ವೈದ್ಯಕೀಯ ಸೌಲಭ್ಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ, ಏಳು ಮಂದಿ ಸಾವು

Major Fire Accident in Private Hospital in Tamil Nadu Dindigul, 7 Dead and Dozens Injured

Related Stories