ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ

accident in Tamil Nadu - ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಪುರಿ ಜಿಲ್ಲೆಯ ತೊಪ್ಪೂರು ಘಾಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ

(Kannada News) : ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಪುರಿ ಜಿಲ್ಲೆಯ ತೊಪ್ಪೂರು ಘಾಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಸೇಲಂ-ಬೆಂಗಳೂರು ಹೆದ್ದಾರಿಯಲ್ಲಿ 14 ಕಾರುಗಳಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 4 ಜನರು ಸಾವನ್ನಪ್ಪಿದ್ದಾರೆ.

ರಸ್ತೆಯ ದೃಶ್ಯಗಳು ಹೃದಯ ವಿದ್ರಾವಕವಾಗಿತ್ತು. ದೇಹಗಳು ರಸ್ತೆಯಲ್ಲಿ ಹರಡಿಕೊಂಡಿದ್ದವು. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆಯು ಎರಡು ಗಂಟೆಗಳ ಕಾಲ ಸಂಚಾರಕ್ಕೆ ತೀವ್ರ ಅಡ್ಡಿ ಉಂಟುಮಾಡಿತು.

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ
ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ

ಸುಮಾರು 30 ಕಿ.ಮೀ ದೂರದ ತನಕ ಸಂಚಾರ ಸ್ಥಗಿತಗೊಂಡಿತ್ತು. ಗಂಭೀರವಾಗಿ ಗಾಯಗೊಂಡವರೊಂದಿಗೆ ಶವಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ತಮಿಳುನಾಡಿನ ಧರ್ಮಪುರಿ ಮತ್ತು ಸೇಲಂ ಗಡಿಯಲ್ಲಿರುವ ತೊಪ್ಪೂರು ಘಾಟ್ ರಸ್ತೆಯಲ್ಲಿ ಭಾರಿ ಲೋಡ್ ಹೊತ್ತುಕೊಂಡಿದ್ದ ಟ್ರಕ್ 14 ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ವಾಹನವನ್ನು ನಿಲ್ಲಿಸಿದ ನಂತರ ಲಾರಿಯ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿ ಚಾಲಕನನ್ನು ಹುಡುಕುತ್ತಿದ್ದಾರೆ.

ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 4 ಜನರು ಸಾವನ್ನಪ್ಪಿದ್ದಾರೆ
ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 4 ಜನರು ಸಾವನ್ನಪ್ಪಿದ್ದಾರೆ

ಇನ್ನು ಪ್ರತ್ಯಕ್ಷದರ್ಶಿ ಟೋಲ್ ಪ್ಲಾಜಾದ ಮ್ಯಾನೇಜರ್ ಲಾರಿಯ ಚಾಲಕನು ವಾಹನದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ ಮತ್ತು ಅವನ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

Web Title : major road accident in Tamil Nadu