ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕೊರೊನಾ ಪಾಸಿಟಿವ್
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಖರ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಮಗೆ ಕೊರೊನಾ ಸೋಂಕು ತಗುಲಿರುವುದನ್ನು ಬಹಿರಂಗಪಡಿಸಿದ್ದಾರೆ.
ಇತ್ತೀಚೆಗೆ ತಮ್ಮನ್ನು ಭೇಟಿಯಾದ ಎಲ್ಲರಿಗೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಖರ್ಗೆ ಸೂಚಿಸಿದರು. ಮೊನ್ನೆ ನಡೆದ ರಾಜ್ಯಸಭಾ ಸಭೆಗಳಲ್ಲಿ ಖರ್ಗೆ ಭಾಗವಹಿಸಿದ್ದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಹಲವು ನಾಯಕರು ಬೀಳ್ಕೊಡುಗೆ ಸಭೆಯಲ್ಲಿ ಪಾಲ್ಗೊಂಡಿದ್ದು ಗೊತ್ತೇ ಇದೆ.
mallikarjun kharge tested covid positive
I have tested positive for #COVID19.
I request those who came in contact with me recently to to take care.
— Mallikarjun Kharge (@kharge) August 9, 2022
Follow us On
Google News |
Advertisement