India News

ನಟ ಶಾರುಖ್ ಖಾನ್‌ಗೆ ಬೆದರಿಕೆ, ಛತ್ತೀಸ್‌ಗಢದಲ್ಲಿ ವ್ಯಕ್ತಿ ಬಂಧನ

ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ (Shah Rukh Khan) ಅವರಿಗೆ ಬೆದರಿಕೆ ಹಿನ್ನೆಲೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇತ್ತೀಚೆಗೆ ವ್ಯಕ್ತಿಯನ್ನು ಬಂಧಿಸಲಾಗಿದೆ.

50 ಲಕ್ಷ ನೀಡುವಂತೆ ವ್ಯಕ್ತಿಯೊಬ್ಬ ಶಾರುಖ್‌ಗೆ ಬೆದರಿಕೆ ಹಾಕಿದ್ದಾನೆ. ಮುಂಬೈ ಪೊಲೀಸರು (Mumbai Police) ಬೆದರಿಕೆಯ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಇತ್ತೀಚೆಗೆ ವ್ಯಕ್ತಿಯನ್ನು ಬಂಧಿಸಿದ್ದಾರೆ.

ನಟ ಶಾರುಖ್ ಖಾನ್‌ಗೆ ಬೆದರಿಕೆ, ಛತ್ತೀಸ್‌ಗಢದಲ್ಲಿ ವ್ಯಕ್ತಿ ಬಂಧನ

ಬೆದರಿಕೆ ಹಾಕಿದ ವ್ಯಕ್ತಿಯನ್ನು ವಕೀಲ ಮೊಹಮ್ಮದ್ ಫೈಜಾನ್ ಖಾನ್ (Mohammad Faizan Khan) ಎಂದು ಗುರುತಿಸಲಾಗಿದೆ. ಈ ಬಗ್ಗೆ, ಮುಂಬೈ ಪೊಲೀಸರು ಇತ್ತೀಚೆಗೆ ಆತನನ್ನು ಛತ್ತೀಸ್‌ಗಢದ ರಾಯ್‌ಪುರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಐದು ದಿನಗಳ ಹಿಂದೆ ಛತ್ತೀಸ್‌ಗಢದ ರಾಯ್‌ಪುರದಿಂದ ನೇರವಾಗಿ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿತ್ತು. ಈ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 308(4) ಮತ್ತು 351(3)(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Man Accused Of Threatening Shah Rukh Khan Arrested In Chhattisgarh

Our Whatsapp Channel is Live Now 👇

Whatsapp Channel

Related Stories