ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದೇ ಹೆಗಲ ಮೇಲೆ ಶವ !
ಆಂಬ್ಯುಲೆನ್ಸ್ ಸಿಗದ ಕಾರಣ ಮೃತರ ಶವವನ್ನು ಕುಟುಂಬಸ್ಥರು ಹೆಗಲ ಮೇಲೆ ಹೊತ್ತುಕೊಂಡು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ
ಭೋಪಾಲ್: ಆಂಬ್ಯುಲೆನ್ಸ್ ಸಿಗದ ಕಾರಣ ಮೃತರ ಶವವನ್ನು ಕುಟುಂಬಸ್ಥರು ಹೆಗಲ ಮೇಲೆ ಹೊತ್ತುಕೊಂಡು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಾಲ್ಕು ವರ್ಷದ ಮಗುವಿನ ಶವವನ್ನು ಒಬ್ಬ ವ್ಯಕ್ತಿ ತನ್ನ ಹೆಗಲ ಮೇಲೆ ಹೊತ್ತುಕೊಂಡು ಮನೆಗೆ ಸಾಗಿಸಿದನು. ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಬಕ್ಸ್‌ವಾಹಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಆಂಬ್ಯುಲೆನ್ಸ್ ಸಮಸ್ಯೆ ಕುರಿತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಸಂಸದರು ಮಾತನಾಡಲಿದ್ದಾರೆ ಎಂದು ಸ್ಥಳೀಯ ವೈದ್ಯಾಧಿಕಾರಿ ತಿಳಿಸಿದ್ದಾರೆ. ಛತ್ತೀಸ್‌ಗಢದ ಕಾಂಗ್ರೆಸ್ ಆಡಳಿತದ ಸುರ್ಗುಜಾದಲ್ಲಿ ಇಂತಹದ್ದೇ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದ ಮಗಳ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದೇ ಇದ್ದುದರಿಂದ ಹೆಗಲ ಮೇಲೆ ಹೊತ್ತುಕೊಂಡು ಹೋಗಬೇಕಾಯಿತು.
Man Carries Dead Body Of Niece On Shoulders In Madhya Pradesh
Follow Us on : Google News | Facebook | Twitter | YouTube