ಹಿಮಾಚಲ ಪ್ರದೇಶದಲ್ಲಿ ಮಂಕಿಪಾಕ್ಸ್ !

Story Highlights

ಹಿಮಾಚಲ ಪ್ರದೇಶದಲ್ಲಿ ಮಂಕಿಪಾಕ್ಸ್ ಸಂಚಲನ ಮೂಡಿಸುತ್ತಿದೆ. ಸೋಲನ್ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಶಂಕಿತ ಪ್ರಕರಣ ದಾಖಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಮಂಕಿಪಾಕ್ಸ್ ಸಂಚಲನ ಮೂಡಿಸುತ್ತಿದೆ. ಸೋಲನ್ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಶಂಕಿತ ಪ್ರಕರಣ ದಾಖಲಾಗಿದೆ. ಬದ್ದಿ ಪ್ರದೇಶಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಮಂಕಿಪಾಕ್ಸ್ ನಿಂದ ಬಳಲುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರ ಮಾದರಿಗಳನ್ನು ಪುಣೆಯ ವೈರಾಲಜಿ ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. 21 ದಿನಗಳ ಹಿಂದೆ ಅವರಿಗೆ ಸೋಂಕು ತಗುಲಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರಿಗೆ ಯಾವುದೇ ಪ್ರಯಾಣದ ಇತಿಹಾಸವಿಲ್ಲ.

ಸದ್ಯ ಅವರು ಐಸೋಲೇಶನ್‌ನಲ್ಲಿದ್ದಾರೆ ಎಂದು ಹೇಳಿದರು. ಆ ಪ್ರದೇಶದಲ್ಲಿ ವೈರಸ್ ಹರಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಅಲ್ಲಿನ ಪರಿಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ದೇಶದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ ಮೂರು ಮತ್ತು ದೆಹಲಿಯಲ್ಲಿ ಒಂದು ಇವೆ.

man found monkeypox like symptoms in himachal pradesh

Related Stories