India News

ಕೋಲ್ಕತ್ತಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಐಸಿಯುನಲ್ಲಿದ್ದ ರೋಗಿ ಸಾವು!

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಐಸಿಯುನಲ್ಲಿದ್ದ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ, ಹಾಗೂ ಸುಮಾರು 80 ರೋಗಿಗಳನ್ನು ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

ಕೇಂದ್ರ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಇಎಸ್‌ಐ ಆಸ್ಪತ್ರೆಯ ವಾರ್ಡ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಆಸ್ಪತ್ರೆಯ ಇತರ ಭಾಗಗಳಿಗೂ ವ್ಯಾಪಿಸಿತು.

ಕೋಲ್ಕತ್ತಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಐಸಿಯುನಲ್ಲಿದ್ದ ರೋಗಿ ಸಾವು!

ಕೂಡಲೇ ಎಚ್ಚೆತ್ತ ಆಸ್ಪತ್ರೆ ಅಧಿಕಾರಿಗಳು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ.

ಈ ಅವಘಡದ ವೇಳೆ ಐಸಿಯುನಲ್ಲಿದ್ದ ಒಬ್ಬ ರೋಗಿ ಮೃತಪಟ್ಟರೆ, ಸುಮಾರು 80 ಮಂದಿಯನ್ನು ಸುರಕ್ಷಿತವಾಗಿ ಹೊರತರಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯ ರಭಸಕ್ಕೆ ಇಡೀ ವಾರ್ಡ್ ಹೊಗೆಯಿಂದ ತುಂಬಿಕೊಂಡಿದ್ದರಿಂದ ರೋಗಿಗಳು ನಮ್ಮನ್ನು ರಕ್ಷಿಸಿ ಎಂದು ಕಿಟಕಿಯಿಂದ ಕೂಗುತ್ತಿದ್ದರು. ಮತ್ತೊಂದೆಡೆ ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವ ಸುಜಿತ್ ಬೋಸ್ ಅವರು ತಕ್ಷಣ ಆಸ್ಪತ್ರೆಗೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

Massive Fire At Kolkata Hospital Patient Dies In Icu

Our Whatsapp Channel is Live Now 👇

Whatsapp Channel

Related Stories