Fire in Delhi: ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ, ನೂರಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮ

Fire in Delhi: ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬುಧವಾರ ಬೆಳಗಿನ ಜಾವದಲ್ಲಿ ನಡೆದ ಈ ಬೆಂಕಿ ಅವಘಡದಲ್ಲಿ 10 ಕಾರುಗಳು ಮತ್ತು ಇತರ 50 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಸುತ್ತಮುತ್ತಲಿನ ಪ್ರದೇಶಗಳು ಭಯಭೀತವಾಗಿದ್ದವು.
ದೆಹಲಿಯ ಜಾಮಿಯಾ ನಗರದ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ದೆಹಲಿ ಅಗ್ನಿಶಾಮಕ ಸೇವಾ ಸಿಬ್ಬಂದಿ 11 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಒಟ್ಟು 10 ಕಾರುಗಳು, ಮೋಟಾರ್ ಸೈಕಲ್, ಎರಡು ಸ್ಕೂಟರ್‌ಗಳು, 30 ಹೊಸ ಇ-ರಿಕ್ಷಾಗಳು ಮತ್ತು 50 ಹಳೆಯ ಇ-ರಿಕ್ಷಾಗಳು ಬೆಂಕಿಗೆ ಆಹುತಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವಾ ಸಿಬ್ಬಂದಿ ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಭಾರತದಲ್ಲಿ ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳ ಸ್ಫೋಟಗಳು ಹೆಚ್ಚಾಗುತ್ತಿವೆ. ಈ ಅಪಘಾತಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಯ ಬಗ್ಗೆ ಭೀತಿ ಹೆಚ್ಚುತ್ತಿದೆ. ನಾಸಿಕ್‌ನಲ್ಲಿ ಸಾರಿಗೆ ಕಂಟೈನರ್‌ನಲ್ಲಿ ಜಿತೇಂದ್ರ ಎಲೆಕ್ಟ್ರಿಕ್ ವಾಹನಗಳಿಗೆ ಸೇರಿದ 40 ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿವೆ.
ಮಾರ್ಚ್ ಮತ್ತು ಏಪ್ರಿಲ್ ನಡುವೆ ದೇಶದ ವಿವಿಧ ಭಾಗಗಳಲ್ಲಿ ಎಂಟು ಇವಿ ಅಪಘಾತಗಳು ಸಂಭವಿಸಿವೆ. ಇತ್ತೀಚಿನ ಘಟನೆ ದೆಹಲಿಯಲ್ಲಿ ನಡೆದಿದೆ. ಈ ನಡುವೆ, ವಿದ್ಯುತ್ ಚಾಲಿತ ವಾಹನದಿಂದ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
Massive Fire In Delhi Jamia Nagar Burns Dozens Of E Rickshaws
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story





