ಮಧ್ಯಪ್ರದೇಶದ ಕಾರಿನಲ್ಲಿ 52 ಕೆಜಿ ಚಿನ್ನ ಮತ್ತು 10 ಕೋಟಿ ನಗದು ಪತ್ತೆ
ಮಧ್ಯಪ್ರದೇಶದ ಅರಣ್ಯ ಪ್ರದೇಶದಲ್ಲಿ ಪೊಲೀಸರು ಅಪರಿಚಿತ ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ.
ಭೋಪಾಲ್ (Bhopal): ಮಧ್ಯಪ್ರದೇಶದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನ ಮತ್ತು ನಗದನ್ನು (Gold and Cash) ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾತಿಬಾದ್ ಪ್ರದೇಶದ ಮೆಂಡೋರಿ ಅರಣ್ಯ ಪ್ರದೇಶದಲ್ಲಿ ಕಾರೊಂದರಿಂದ ಬಾರೀ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದೆ.
ಆ ಕಾರಿನಿಂದ ಸುಮಾರು 52 ಕೆಜಿ ಚಿನ್ನ ಮತ್ತು ಹತ್ತು ಕೋಟಿ ನೋಟುಗಳ ಬಂಡಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಆದರೆ, ಕಾರಿನಲ್ಲಿ ಚಿನ್ನ ಮತ್ತು ಹಣವನ್ನು ಯಾರು ಬಿಟ್ಟು ಹೋಗಿದ್ದಾರೆ ಎಂಬ ಬಗ್ಗೆ ಪೊಲೀಸರು ಮತ್ತು ಆದಾಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕಾರಿನಲ್ಲಿ ಪತ್ತೆಯಾದ ಚಿನ್ನದ ಮೌಲ್ಯ ಸುಮಾರು 42 ಕೋಟಿ ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಯಾರು ಯಾವ ಕಾರಣಕ್ಕೆ ಹಣ ಬಿಟ್ಟು ಹೋಗಿದ್ದಾರೆ ಎಂಬ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ.
Massive Haul of Gold and Cash Seized by Police in Madhya Pradesh