ಎಚ್‌ಸಿಎಲ್ ಟೆಕ್ನಾಲಜೀಸ್ ಬೃಹತ್ ನೇಮಕಾತಿ

ನೋಯ್ಡಾ ಮೂಲದ ಪ್ರಮುಖ ಸಾಫ್ಟ್‌ವೇರ್ ಕಂಪನಿ ಎಚ್‌ಸಿಎಲ್ ಟೆಕ್ನಾಲಜೀಸ್ ಬೃಹತ್ ನೇಮಕಾತಿ ಅಭಿಯಾನವನ್ನು ನಡೆಸುವುದಾಗಿ ಘೋಷಿಸಿದೆ

ನೋಯ್ಡಾ ಮೂಲದ ಪ್ರಮುಖ ಸಾಫ್ಟ್‌ವೇರ್ ಕಂಪನಿ ಎಚ್‌ಸಿಎಲ್ ಟೆಕ್ನಾಲಜೀಸ್ ಬೃಹತ್ ನೇಮಕಾತಿ ಅಭಿಯಾನವನ್ನು ನಡೆಸುವುದಾಗಿ ಘೋಷಿಸಿದೆ.

ಮುಂದಿನ ಎರಡು ತ್ರೈಮಾಸಿಕಗಳಲ್ಲಿ 10,000-12,000 ಹೊಸ ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. 2022 ರ ಎರಡನೇ ತ್ರೈಮಾಸಿಕದಲ್ಲಿ ಇನ್ನೂ 5,800 ಜನರನ್ನು ನೇಮಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನು ಎಚ್‌ಸಿಎಲ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ವೀವಿ ಅಪ್ಪಾರಾವ್ ಬಹಿರಂಗಪಡಿಸಿದ್ದಾರೆ.

ಸೆಪ್ಟೆಂಬರ್ 2021 ರ ತ್ರೈಮಾಸಿಕದ ಅಂತ್ಯದ ವೇಳೆಗೆ, 11,135 ಜನರನ್ನು ನೇಮಿಸಿಕೊಳ್ಳಲಾಗಿದೆ. ಕಂಪನಿಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ನೇಮಕಾತಿ ನಡೆದಿರುವುದು ಇದೇ ಮೊದಲು.

Stay updated with us for all News in Kannada at Facebook | Twitter
Scroll Down To More News Today