ಆಂಧ್ರಪ್ರದೇಶದಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ಅಪಘಾತ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಸಾವು!
ಆಂಧ್ರಪ್ರದೇಶದಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 3 ಜನರು ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 3 ಜನರು ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ವಿಕಾಸ್ ರೆಡ್ಡಿ, ಪ್ರವೀಣ್ ಮತ್ತು ಕಲ್ಯಾಣ್ ರಾಮ್ ಚಿತ್ತೂರಿನಲ್ಲಿ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ತೆರಳಿದ್ದರು.
ಅಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಬಳಿಕ ಕುಪ್ಪಂಗೆ ತೆರಳಿದರು. ರಸ್ತೆಯ ಮಾರ್ಗಮದ್ಯ ಏಕಾಏಕಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರ ಮೃತದೇಹಗಳನ್ನು ಹೊರತೆಗೆದು ಪರಿಶೀಲನೆ ನಡೆಸಿದ್ದಾರೆ.
medical college students were killed In Andhra Pradesh accident Today
Follow us On
Google News |