ಕಾಶ್ಮೀರದಲ್ಲಿ ವಲಸೆ ಕಾರ್ಮಿಕನ ಹತ್ಯೆ

ಕಾಶ್ಮೀರದಲ್ಲಿ ವಲಸೆ ಕಾರ್ಮಿಕನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ದುಷ್ಕೃತ್ಯ ಎಸಗಿದ್ದಾರೆ. ಬಂಡಿಪೋರಾ ಜಿಲ್ಲೆಯ ಸೊದ್ನಾರಾ ಸಂಬಲ್‌ನಲ್ಲಿ ವಲಸೆ ಕಾರ್ಮಿಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ಮುಂಜಾನೆ ಕಾರ್ಮಿಕನೊಬ್ಬನ ಮೇಲೆ ಉಗ್ರರು ಗುಂಡು ಹಾರಿಸಿದ್ದು, ಈ ವೇಳೆ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಈತನನ್ನು ಬಿಹಾರದ ಮಾಧೇಪುರದ ಮೊಹಮ್ಮದ್ ಅಮ್ರೇಜ್ ಎಂದು ಗುರುತಿಸಲಾಗಿದೆ.

ಆದರೆ, ಕಾರ್ಮಿಕನ ಮೇಲೆ ಗುಂಡಿನ ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿಲ್ಲ. ಗುರುವಾರ ಬೆಳಗ್ಗೆ ರಾಜೌರಿಯ ಸೇನಾ ನೆಲೆ ಶಿಬಿರದ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿರುವುದು ಗೊತ್ತೇ ಇದೆ.

RAKESH DATTA

ಬಂದೂಕುಧಾರಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದರು. ಇತರ ಐವರು ಯೋಧರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ಭಯೋತ್ಪಾದಕರು ರಾಜೌರಿಯಿಂದ 25 ಕಿಮೀ ದೂರದಲ್ಲಿರುವ ದರ್ಹಾಲ್ ಪ್ರದೇಶದ ಪರ್ಗಲ್‌ನಲ್ಲಿರುವ ಸೇನಾ ಶಿಬಿರವನ್ನು ಗುರಿಯಾಗಿಸಿಕೊಂಡಿದ್ದಾರೆ.

migrant labourer shot dead in jammu kashmir bandipora