ಸರ್ವಪಕ್ಷ ಸಭೆಗೆ ಮೋದಿ ಗೈರು
ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಭಾನುವಾರ ಸರ್ವಪಕ್ಷಗಳ ಸಭೆ ನಡೆಯಿತು.
ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಭಾನುವಾರ ಸರ್ವಪಕ್ಷಗಳ ಸಭೆ ನಡೆಯಿತು. ಸಭೆಗೆ ಗೈರಾಗಿದ್ದಕ್ಕೆ ಪ್ರತಿಪಕ್ಷ ನಾಯಕರು ಸರ್ಕಾರವನ್ನು ಟೀಕಿಸಿದರು. ಮಹತ್ವದ ಸಭೆಗೆ ಪ್ರಧಾನಿ ಗೈರು ಹಾಜರಾಗಿರುವುದನ್ನು ಪ್ರಶ್ನಿಸಿದರು.
ಸರ್ವಪಕ್ಷಕ್ಕೆ ಪ್ರಧಾನಿ ಹಾಜರಾಗದಿರುವುದು ‘ಅಸಂಸದೀಯ’ವೇ? ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ವಿರೋಧ ಪಕ್ಷಗಳು ಅಗ್ನಿಪಥ, ಹಣದುಬ್ಬರ, ನಿರುದ್ಯೋಗ ಮತ್ತು ದೇಶದ ಒಕ್ಕೂಟ ವ್ಯವಸ್ಥೆಯ ರಚನೆಯನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿರುವ ರೀತಿಯನ್ನು ಪ್ರಸ್ತಾಪಿಸಿದವು.
ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸಭೆಗಳನ್ನು ಸುಗಮವಾಗಿ ನಡೆಸಲು ಎಲ್ಲಾ ಪಕ್ಷಗಳು ಸಹಕರಿಸುವಂತೆ ಕೋರಿದರು. ಪ್ರತಿಪಕ್ಷಗಳ ವಿರುದ್ಧ ಬಿಜೆಪಿ ಪ್ರತಿದಾಳಿ ನಡೆಸಿತು. ಈ ಹಿಂದೆ ಪ್ರಧಾನಿಯಾಗಿದ್ದ ಮನಮೋಹನ್ ಅವರು ಹಲವು ಬಾರಿ ಸರ್ವಪಕ್ಷ ಸಭೆಗೆ ಬಂದಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
modi was absent from the all party meeting
ಐಶ್ವರ್ಯಾ ರೈ ಬ್ಯೂಟಿ ಸೀಕ್ರೆಟ್ ರಿವೀಲ್
Follow us On
Google News |
Advertisement