Mulayam Singh Yadav: ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ
Mulayam Singh Yadav Passed Away: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ನಿಧನರಾಗಿದ್ದಾರೆ.
Mulayam Singh Yadav Passed Away: ಮುಲಾಯಂ ಸಿಂಗ್ ಯಾದವ್ ನಿಧನ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ನಿಧನರಾಗಿದ್ದಾರೆ. ಮುಲಾಯಂ ಸಿಂಗ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಗುರಗಾಂವ್ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಆಗಸ್ಟ್ 22ರಂದು ಮುಲಾಯಂ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರದಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರ ಸ್ಥಿತಿ ಹದಗೆಟ್ಟಿದ್ದರಿಂದ ಮೃತಪಟ್ಟಿದ್ದಾರೆ. ಮುಲಾಯಂ ಸಿಂಗ್ ಮೂರು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಮುಲಾಯಂ ಸಿಂಗ್ ಯಾದವ್ ಅವರು 22 ನವೆಂಬರ್ 1939 ರಂದು ಜನಿಸಿದರು. ಮುಲಾಯ್ ಸಿಂಗ್ ಅವರಿಗೆ ಇಬ್ಬರು ಗಂಡು ಮಕ್ಕಲು. 1967ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಮುಲಾಯಂ 1977ರಲ್ಲಿ ಮೊದಲ ಬಾರಿಗೆ ಯುಪಿ ಸಚಿವರಾದರು.
Follow us On
Google News |