ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ದೆಹಲಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

Story Highlights

ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬಾಂಬ್ ಬೆದರಿಕೆಯಿಂದಾಗಿ ಎಚ್ಚೆತ್ತ ಪೈಲಟ್ ವಿಮಾನವನ್ನು ದೆಹಲಿಗೆ ತಿರುಗಿಸಿದರು.

ನವದೆಹಲಿ: ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ (Air India Flight) ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬಾಂಬ್ ಬೆದರಿಕೆಯಿಂದಾಗಿ ಎಚ್ಚೆತ್ತ ಪೈಲಟ್ ವಿಮಾನವನ್ನು ದೆಹಲಿಯಲ್ಲಿ (Delhi Airport) ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಸೋಮವಾರ ಬೆಳಗ್ಗೆ ಏರ್ ಇಂಡಿಯಾ ವಿಮಾನ ಎಐ119 ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿತ್ತು. ಈ ವೇಳೆ ವಿಮಾನದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇರುವ ಬಗ್ಗೆ ಸಿಬ್ಬಂದಿ ಎಟಿಸಿಗೆ ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ತುರ್ತು ಲ್ಯಾಂಡಿಂಗ್‌ಗೆ ಅನುಮತಿ ನೀಡಲಾಯಿತು ಮತ್ತು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡಿಂಗ್ ಮಾಡಲಾಯಿತು.

ಅದರ ನಂತರ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿ ಪ್ರತ್ಯೇಕ ರನ್‌ವೇಗೆ ಕರೆದೊಯ್ಯಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವಿಚಾರವಾಗಿ ಏರ್ ಇಂಡಿಯಾ ಕಂಪನಿಯೂ ಪ್ರತಿಕ್ರಿಯೆ ನೀಡಿದೆ. ಸರ್ಕಾರದ ನಿಯಮಗಳ ಪ್ರಕಾರ ವಿಮಾನವನ್ನು ದೆಹಲಿಗೆ ತಿರುಗಿಸಲಾಗಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ. ಸದ್ಯ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.

Mumbai New York Bound Air India Plane Emergency Landing In Delhi After Bomb Threat

Related Stories