India News

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ!

ಮುಂಬೈ (Mumbai): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (UP CM Yogi Adityanath) ಅವರನ್ನು ಕೊಲ್ಲುವುದಾಗಿ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ. ಹತ್ತು ದಿನದೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಬಾಬಾ ಸಿದ್ದಿಕಿಯಂತೆ ಕೊಲೆ ಮಾಡುವುದಾಗಿ ಪುಂಡರು ಎಚ್ಚರಿಸಿದ್ದಾರೆ.

ಶನಿವಾರ ಸಂಜೆ ಮುಂಬೈನ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಅಪರಿಚಿತ ನಂಬರ್‌ನಿಂದ ಸಂದೇಶ ಬಂದಿದೆ (Threat Message). ಸದ್ಯ ಈ ಮಾಹಿತಿಯನ್ನು ಯುಪಿ ಪೊಲೀಸರಿಗೆ ರವಾನಿಸಲಾಗಿದೆ. ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ!

ಕಳೆದ ತಿಂಗಳು ಮಹಾರಾಷ್ಟ್ರದ ಎನ್‌ಸಿಪಿ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಅವರನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗುಂಡಿಕ್ಕಿ ಹತ್ಯೆ ಮಾಡಿದ್ದು ಗೊತ್ತೇ ಇದೆ. ಬಾಲಿವುಡ್ ಮಸಲ್ ಹೀರೋ ಸಲ್ಮಾನ್ ಖಾನ್ ಗೆ ಆತ್ಮೀಯರಾಗಿದ್ದರಿಂದ ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಸಿದ್ದಿಕಿ ಪುತ್ರ ಜೀಶಾನ್ ಹಾಗೂ ಸಲ್ಮಾನ್ ಖಾನ್ ಅವರಿಗೂ ಬೆದರಿಕೆ ಬಂದಿದೆ. ಈ ಪ್ರಕರಣದಲ್ಲಿ ಈಗಾಗಲೇ ಮುಂಬೈ ಪೊಲೀಸರು ಮುಸ್ತಫಾ ಎಂಬಾತನನ್ನು ಬಂಧಿಸಿದ್ದಾರೆ.

Mumbai Police Receives Death Threat To Up CM Yogi Adityanath

Our Whatsapp Channel is Live Now 👇

Whatsapp Channel

Related Stories