ನೂತನ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಪ್ರಮಾಣ ವಚನ ಸ್ವೀಕಾರ

Story Highlights

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಕೇಂದ್ರ ಸರ್ಕಾರ ಅಕ್ಟೋಬರ್ 24ರಂದು ಅಧಿಸೂಚನೆ ಹೊರಡಿಸಿತ್ತು. 

  • ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿ
  • ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ
  • ಆರು ತಿಂಗಳ ಕಾಲ ಸಿಜೆಐ ಆಗಿ ಮುಂದುವರಿಯಲಿದ್ದಾರೆ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ (Justice Sanjiv Khanna) ಅವರು ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ನ್ಯಾಯಮೂರ್ತಿ ಖನ್ನಾ ಆರು ತಿಂಗಳ ಕಾಲ ಸಿಜೆಐ ಆಗಿ ಮುಂದುವರಿಯಲಿದ್ದಾರೆ. ಮುಂದಿನ ವರ್ಷ ಮೇ 13ಕ್ಕೆ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಪ್ರಸ್ತುತ ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಭಾನುವಾರ ನಿವೃತ್ತರಾದರು.

ಅವರ ಶಿಫಾರಸಿನ ಮೇರೆಗೆ ನ್ಯಾಯಮೂರ್ತಿ ಖನ್ನಾ ಅವರನ್ನು ನೂತನ ಸಿಜೆಐ ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಕ್ಟೋಬರ್ 24ರಂದು ಅಧಿಸೂಚನೆ ಹೊರಡಿಸಿತ್ತು.

New CJI Justice Sanjiv Khanna will take oath today

Related Stories