ಬಿಜೆಪಿಯೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳುವುದಿಲ್ಲ: ಬಿಹಾರ ಸಿಎಂ ನಿತೀಶ್ ಕುಮಾರ್

ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವ ಉದ್ದೇಶವಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ.

ಪಾಟ್ನಾ: ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವ ಉದ್ದೇಶವಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ. ಇನ್ನು ಮುಂದೆ ಸಮಾಜವಾದಿಗಳೊಂದಿಗೆ ಮಾತ್ರ ಕೆಲಸ ಮಾಡುತ್ತೇವೆ ಎಂದು ಜೆಡಿಯು ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ಅಭಿಮಾನದಿಂದ ಕಣ್ಣು ಮುಚ್ಚಿರುವ ನಾಯಕರು ಆಡಳಿತ ನಡೆಸುತ್ತಿದ್ದಾರೆ ಎಂದು ಟೀಕಿಸಿದರು. ದೇಶದ ಅಭಿವೃದ್ಧಿಗೆ ಶ್ರಮಿಸದೆ ಸಮಾಜದಲ್ಲಿ ಒಡಕು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೀವನದಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಅಥವಾ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸಮಾಜವಾದಿ ಸಿದ್ಧಾಂತ ಹೊಂದಿರುವವರ ಜತೆಗೂಡಿ ರಾಜ್ಯದ ಅಭಿವೃದ್ಧಿಗೆ ಮುಂದಾಗುವುದಾಗಿ ತಿಳಿಸಿದರು.

Also Read : Web Stories

ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಸ್ಮರಿಸಿದರು. ಅವರೆಲ್ಲರೂ ದೇಶಕ್ಕಾಗಿ ದುಡಿದವರು. ಈಗ ಇಡೀ ಪಕ್ಷವೇ ಅಹಂಕಾರದಿಂದ ತುಂಬಿದೆ ಎಂದರು. ವಾಜಪೇಯಿ ಅವರ ಸಂಪುಟದಲ್ಲಿ ಮೂರು ಇಲಾಖೆಗಳ ಹೊಣೆ ಹೊತ್ತಿದ್ದನ್ನು ಈಗಿನ ಬಿಜೆಪಿ ನಾಯಕತ್ವ ಮರೆತಿದೆ ಎಂದರು. ಪಕ್ಷದಲ್ಲಿ ನಾಯಕರಾಗಿರುವವರು ಸಂಪೂರ್ಣ ದುರಹಂಕಾರದಿಂದ ವರ್ತಿಸುತ್ತಿದ್ದಾರೆ ಎನ್ನಲಾಗಿದೆ.

No Alliance With Bjp Ever Again Bihar Cm Nitish Kumar