Heavy Rains, ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆ, ಭೂಕುಸಿತ
Heavy Rains, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ
ನವದೆಹಲಿ: ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೂಕುಸಿತ (Heavy Rains And Landslides) ಉಂಟಾಗಿದೆ. ಈಶಾನ್ಯ ರಾಷ್ಟ್ರೀಯ ಹೆದ್ದಾರಿ ಹಾಳಾಗಿದೆ. ಬುಧವಾರ ಬೆಳಗ್ಗೆಯಿಂದ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಭೂಕುಸಿತದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಮೇಘಾಲಯದ ಲುಮ್ನಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 6 (ಎನ್ಎಚ್ 06) ತೀವ್ರವಾಗಿ ಹಾನಿಗೊಳಗಾಗಿದೆ. ಒಂದು ಲಾರಿ ಮತ್ತು ಕಾರು ಹಳ್ಳದಲ್ಲಿ ಸಿಲುಕಿಕೊಂಡಿವೆ. ಇದರಿಂದ ಸಂಚಾರಕ್ಕೆ ಭಾರಿ ಅಡಚಣೆ ಉಂಟಾಯಿತು. ಸ್ಥಳದಲ್ಲಿ ವಿಪತ್ತು ನಿರ್ವಹಣಾ ಅಧಿಕಾರಿಗಳು ಸಂಘಟಿತ ಕ್ರಮ ಕೈಗೊಂಡರು. ಎನ್ ಎಚ್ 6ರಲ್ಲಿ ವಾಹನ ದಟ್ಟಣೆ ಹೆಚ್ಚಿರುವುದರಿಂದ ವಾಹನ ಸವಾರರು ಬೇರೆ ರಸ್ತೆಯಲ್ಲಿ ತೆರಳುವಂತೆ ಸೂಚಿಸಲಾಗಿದೆ.
ಇದೇ ವೇಳೆ ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಮಾಧ್ಯಮಗಳೊಂದಿಗೆ ಮಾತನಾಡಿದರು. ಭಾರೀ ಮಳೆಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿವೆ ಎಂದು ಹೇಳಿದರು. ಹಲವು ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ್ದೇನೆ ಎಂದರು.
ಟ್ರಾಫಿಕ್ ಸರಿಪಡಿಸಲು ಹಾಗೂ ನಿಲುಗಡೆ ಮಾಡಿದ ವಾಹನಗಳ ಚಲನೆಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ರಸ್ತೆ ಮಧ್ಯೆ ಬೃಹತ್ ಲಾರಿಯೊಂದು ಸಿಲುಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
North Easts Highway Nh06 Collapses After Incessant Rains And Landslides
#WATCH | East Jaintia Hills, Meghalaya: Due to an unrelenting heavy downpour, some parts of the road on National Highway-6 under Lumshnong Police Station limits got heavily damaged, leading to traffic disruption.
(Source: East Jaintia Hills district police) pic.twitter.com/8huoFIiN86
— ANI (@ANI) June 16, 2022
Follow Us on : Google News | Facebook | Twitter | YouTube