ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅಧಿಕಾರ ಸ್ವೀಕಾರ
Omar Abdullah : ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉನ್ನತ ನಾಯಕ ಒಮರ್ ಅಬ್ದುಲ್ಲಾ ಮಧ್ಯಾಹ್ನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು.
Omar Abdullah : ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉನ್ನತ ನಾಯಕ ಒಮರ್ ಅಬ್ದುಲ್ಲಾ ಅವರು ಮಧ್ಯಾಹ್ನ ಸಿಎಂ (Jammu and Kashmir CM) ಆಗಿ ಅಧಿಕಾರ ಸ್ವೀಕರಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಸಂಬಂಧ ಕಡತಕ್ಕೆ ಸಹಿ ಹಾಕಿದ್ದಾರೆ. ಆ ಬಳಿಕ ಒಮರ್ ಅವರು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದರು.
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅವರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಹಲವು ವಿವರಗಳನ್ನು ಕೇಳಿದರು. ಬೆಳಗ್ಗೆ 11.30ಕ್ಕೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಚೆನ್ನೈ ಮಳೆ ಅವಾಂತರ, ಸೂಪರ್ ಸ್ಟಾರ್ ರಜನಿಕಾಂತ್ ಮನೆಗೆ ನುಗ್ಗಿದ ಮಳೆ ನೀರು
ಶ್ರೀನಗರದಲ್ಲಿರುವ ‘ಶೇರ್ ಇ ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್’ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ವಿವಿಧ ಪಕ್ಷಗಳ ಹಲವು ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಲೋಕಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರರು ಇದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪಿಡಿಪಿ ಅಧ್ಯಕ್ಷೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ಮತ್ತು ಸಿಪಿಐ ನಾಯಕ ಡಿ ರಾಜಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚೆನ್ನೈನಲ್ಲಿ 2ನೇ ದಿನವೂ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿರುವ ಚೆನ್ನೈಗೆ IMD ರೆಡ್ ಅಲರ್ಟ್
ಒಮರ್ ಅಬ್ದುಲ್ಲಾ ಅವರು ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು. ಆ ಬಳಿಕ ಬಿಜೆಪಿ ಮತ್ತು ಪಿಡಿಪಿ ಮೈತ್ರಿಕೂಟ ಅಲ್ಲಿ ಅಧಿಕಾರ ಹಿಡಿಯಿತು.
ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ 2018ರಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿತ್ತು. ಅದರ ನಂತರ, ಕೇಂದ್ರವು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿತು. ಆರ್ಟಿಕಲ್ 370 ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯಿತು.
Omar Abdullah took charge as the Chief Minister of Jammu and Kashmir