ಭಯೋತ್ಪಾದಕರ ಗುಂಡಿನ ದಾಳಿಗೆ ಓರ್ವ ವ್ಯಕ್ತಿ ಬಲಿ
ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಹಾವಳಿ ಹೆಚ್ಚಾಗಿದೆ
ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಹಾವಳಿ ಹೆಚ್ಚಾಗಿದೆ. ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಉಗ್ರರಿಗಾಗಿ ಪ್ರದೇಶದಲ್ಲಿ ಶೋಧ ನಡೆಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ.
ಸೋಮವಾರ ಮಧ್ಯರಾತ್ರಿ, ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಅನ್ನು ಎಸೆದರು. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
one shot dead one injured in shopian