Terrorist Encounter, ಕುಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ಲಾ ಭಯೋತ್ಪಾದಕ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಕುಲ್ಗಾಮ್ ಜಿಲ್ಲೆಯ (Kulgam) ಖಂಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಘರ್ಷಣೆ ಮುಂದುವರಿದಿದೆ. ಎನ್‌ಕೌಂಟರ್ (Terrorist Encounter) ವೇಳೆ ಭದ್ರತಾ ಪಡೆಗಳು ಓರ್ವ ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ.
ಇದನ್ನೂ ಓದಿ : ಸೇತುವೆಯಿಂದ ನದಿಗೆ ಬಿದ್ದ ತೈಲ ಟ್ಯಾಂಕರ್, ನಾಲ್ವರು ಸಾವು
ಖಂಡಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ದಾಳಿ ನಡೆಸಿದರು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಹೇಳಿದರು.
ಇದನ್ನೂ ಓದಿ : ಭಾರತದಲ್ಲಿ 8,329 ಹೊಸ ಕೊರೊನಾ ಪ್ರಕರಣಗಳು ದಾಖಲು
ಏತನ್ಮಧ್ಯೆ, ಬಾರಾಮುಲ್ಲಾ ಜಿಲ್ಲೆಯ ನೆಹಲ್ಪೋರಾ ಪ್ರದೇಶದಲ್ಲಿ ಪೊಲೀಸರು ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಅವರನ್ನು ಲಷ್ಕರ್-ಎ-ತೊಯ್ಬಾದ ಇಶ್ರದ್ ಅಹ್ಮದ್ ಮಿರ್ ಮತ್ತು ಜಾಹಿದ್ ಬಶೀರ್ ಎಂದು ಗುರುತಿಸಲಾಗಿದೆ. ಅವರಿಂದ ಎರಡು ಚೀನಾದ ರೈಫಲ್‌ಗಳು, 18 ಸುತ್ತು ಮದ್ದುಗುಂಡುಗಳು, ಎರಡು ಮ್ಯಾಗಜೀನ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
One Terrorist Encounter In Kulgam Jammu And Kashmir



