ಕಳೆದ 5 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು

ಕಳೆದ ಐದು ವರ್ಷಗಳಲ್ಲಿ ಆರು ಲಕ್ಷ ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಕಳೆದ ಐದು ವರ್ಷಗಳಲ್ಲಿ ಆರು ಲಕ್ಷ ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, 1.33 ಕೋಟಿ (1,33,83,718) ಭಾರತೀಯರು ವಿದೇಶದಲ್ಲಿ ನೆಲೆಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ನಿತ್ಯಾನಂದ ರಾಯ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.

2017 ರಲ್ಲಿ, 133,049 ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ವಿದೇಶಗಳಲ್ಲಿ ಭಾರತೀಯ ಮೂಲದ ಜನರು ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಹಲವರು ಐಕಾನಿಕ್ ಟೆಕ್ ಕಂಪನಿಗಳಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯರು ಉದ್ಯೋಗದಲ್ಲಿದ್ದಾರೆ. ಟ್ವಿಟರ್ ಜೊತೆಗೆ, ಭಾರತೀಯರು ಗೂಗಲ್, ಮೈಕ್ರೋಸಾಫ್ಟ್, ಅಡೋಬ್ ಮತ್ತು ಐಬಿಎಂನಂತಹ ಐಕಾನಿಕ್ ಕಂಪನಿಗಳಿಗೆ ಸಿಇಒಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today