ಪ್ರಕಾಶ್ ಸಿಂಗ್ ಬಾದಲ್ ಅನಾರೋಗ್ಯ.. ಬೇಗ ಗುಣಮುಖರಾಗಲಿ ಎಂದು ಮೋದಿ ಟ್ವೀಟ್
ಪ್ರಕಾಶ್ ಸಿಂಗ್ ಬಾದಲ್ ಮೊಹಾಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ
ನವದೆಹಲಿ: ಶಿರೋಮಣಿ ಅಕಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬಾದಲ್ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕಾಶ್ ಸಿಂಗ್ ಬಾದಲ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪ್ರಕಾಶ್ ಸಿಂಗ್ ಬಾದಲ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಈ ಬಗ್ಗೆ ಮೋದಿ ಟ್ವೀಟ್ ಮಾಡಿದ್ದಾರೆ.
ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಪ್ರಕಾಶ್ ಸಿಂಗ್ ಬಾದಲ್ ಅವರನ್ನು ಜೂನ್ 6 ರಂದು ಚಂಡೀಗಢದ ಪಿಜಿಐಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ. ಮರುದಿನ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು. ಈ ಹಿಂದೆಯೂ ಬಾದಲ್ ಕೋವಿಡ್ ಬಾಧಿತವಾಗಿತ್ತು. ಪ್ರಕಾಶ್ ಸಿಂಗ್ ಬಾದಲ್ ಅವರು ಐದು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
Parkash Singh Badal Admitted To Hospital In Mohali
Praying for the good health and speedy recovery of Shri Parkash Singh Badal Ji.
— Narendra Modi (@narendramodi) June 12, 2022
Follow Us on : Google News | Facebook | Twitter | YouTube