ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ದುರಂತ, ಹೃದಯಾಘಾತದಿಂದ ಪ್ರಯಾಣಿಕ ಸಾವು
ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿದೆ. ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ
ಹೈದರಾಬಾದ್: ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿದೆ. ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಒಬ್ಬ ಪ್ರಯಾಣಿಕ ಕುವೈತ್‌ನಿಂದ ಹೈದರಾಬಾದ್‌ಗೆ ರಯಾಣಿಸುವಾಗ ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿತ್ತು. ವಿಮಾನ ಇನ್ನೂ ಹಾರಾಟದಲ್ಲಿಯೇ ಇತ್ತು.
ವಿಮಾನವು ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಇದ್ದ ಕಾರಣ, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಮತ್ತು ವೈದ್ಯಕೀಯ ತಂಡಗಳಿಗೆ ಎಚ್ಚರಿಕೆ ನೀಡಿದರು. ವಿಮಾನ ಲ್ಯಾಂಡ್ ಆದ ನಂತರ, ಪ್ರಯಾಣಿಕನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow us On
Google News |
Advertisement