Welcome To Kannada News Today

ಇನ್ನಷ್ಟು ಇಳಿಕೆ ಕಂಡ ಪೆಟ್ರೋಲ್-ಡೀಸೆಲ್

Petrol and diesel prices have come down - National News

🌐 Kannada News :

ಕನ್ನಡ ನ್ಯೂಸ್ ಟುಡೇIndia News

ಶುಕ್ರವಾರ ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್(Petrol) ದರ ಪ್ರತಿ ಲೀಟರ್‌ಗೆ ೧೪ ಪೈಸೆ ಇಳಿಕೆ ಆಗಿದ್ದು, ಇದೇ ವೇಳೆ ಡೀಸೆಲ್(Diesel) ದರ ಪ್ರತಿ ಲೀಟರ್‌ಗೆ ೧೫ -೨೨ ಪೈಸೆ ಇಳಿಕೆ ಆಗಿದೆ. ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ.

ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಈ ಹಿಂದೆ ಕಚ್ಚಾ ತೈಲದ ಬೆಲೆ ಹೆಚ್ಚಳದಿಂದಾಗಿ, ದೇಶದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಾಗಿದೆ. ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಥಿರವಾಗಿದ್ದರೂ, ಬೆಂಟ್ರಾ ಕಚ್ಚಾ ಬೆಲೆ ಸುಮಾರು ಎರಡು ತಿಂಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ.

ಇಂದು ಪರಿಷ್ಕರಿಸಲಾದ ತೈಲ ಬೆಲೆ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ೭೫.೪೧ ರೂ. ಮತ್ತು ಡೀಸೆಲ್ ಲೀಟರ್‌ಗೆ ೬೮.೭೭ ರೂ. ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್(Petrol) ದರ ೭೭.೯೩ ರೂ. , ಡೀಸೆಲ್(Diesel) ದರ ಪ್ರತಿ ಲೀಟರ್‌ಗೆ ೭೧.೦೬ ರೂ. ಆಗಿದೆ.////

Quick Links : India News Kannada | National News Kannada


 

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.