Petrol Diesel Price Today : ಹಬ್ಬದ ದಿನ ಏರಿಕೆ ಬರೆ, ಹೆಚ್ಚಿದ ಇಂಧನ ಬೆಲೆ

ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ (Petrol and Diesel) ಬೆಲೆಗಳು ನಿಲ್ಲುವಂತಿಲ್ಲ. ಸೆಪ್ಟೆಂಬರ್‌ನಲ್ಲಿ ಸ್ಥಿರವಾಗಿದ್ದ ಇಂಧನ ಬೆಲೆಗಳು ಅಕ್ಟೋಬರ್‌ನಿಂದ ನಿರಂತರವಾಗಿ ಏರಿಕೆಯಾಗುತ್ತಿವೆ.

Petrol and Diesel Price (ಪೆಟ್ರೋಲ್ ಮತ್ತು ಡೀಸೆಲ್ ಬೆಲೆ): ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ನಿಲ್ಲುವಂತೆ ಕಾಣುತ್ತಿಲ್ಲ. ಸೆಪ್ಟೆಂಬರ್‌ನಲ್ಲಿ ಸ್ಥಿರವಾಗಿದ್ದ ಇಂಧನ ಬೆಲೆಗಳು ಅಕ್ಟೋಬರ್‌ನಿಂದ ನಿರಂತರವಾಗಿ ಏರಿಕೆಯಾಗುತ್ತಿವೆ.

ಪೆಟ್ರೋಲ್ ಬೆಲೆಯನ್ನು ಶುಕ್ರವಾರ 35 ಪೈಸೆ ಹೆಚ್ಚಿಸಲಾಗಿದೆ. ಇಂಧನ ಬೆಲೆ ಏರಿಕೆಯು ಅಗತ್ಯ ಸರಕು ಮತ್ತು ಸಾರಿಗೆ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಮತ್ತೊಂದೆಡೆ, ಅನಿಲದ ಬೆಲೆಯು ಸಹ ನಿಯಂತ್ರಿಸಲಾಗದೆ ಏರುತ್ತಿದೆ ಮತ್ತು ಸಾಮಾನ್ಯ ಜನರು ತೀವ್ರವಾಗಿ ಬಳಲುತ್ತಿದ್ದಾರೆ. ಇಲ್ಲಿಯವರೆಗೆ 2021 ರಲ್ಲಿ, ಪೆಟ್ರೋಲ್ ಪ್ರತಿ ಲೀಟರ್‌ಗೆ 21.70 ರೂ.ಗಳಷ್ಟು ಏರಿಕೆಯಾಗಿದ್ದು, ಡೀಸೆಲ್ ಮೇಲೆ 20.70 ರೂ ಏರಿಕೆಯಾಗಿದೆ.

ಶುಕ್ರವಾರ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ನೋಟ.

ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿ 105.14 ರೂ. ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿ 93.87 ರೂ ತಲುಪಿದೆ.

ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ 34 ಪೈಸೆ ಏರಿಕೆಯಾಗಿ ರೂ. 111.09 ತಲುಪಿದೆ. ಡೀಸೆಲ್ ಬೆಲೆ 37 ಪೈಸೆ ಏರಿಕೆಯಾಗಿ ಪ್ರತಿ ಲೀಟರ್‌ಗೆ 101.78 ರೂ ಆಗಿದೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 34 ಪೈಸೆ ಏರಿಕೆಯಾಗಿ ಪ್ರತಿ ಲೀಟರ್‌ಗೆ 105.76 ರೂ ತಲುಪಿದೆ. ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿ 96.98 ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ₹ 108.44 ರೂ ಇದೆ.