ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ; ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಭರವಸೆ
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, 'ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ (Petrol, diesel prices) ಸಾಧ್ಯತೆ ಇದೆ' ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಪ್ಯಾಲೆಸ್ತೀನ್‌ನ ಹಮಾಸ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಮೇಲೆ ಸರಣಿ ದಾಳಿ ನಡೆಸುತ್ತಿರುವ ಇರಾನ್ ಇತ್ತೀಚೆಗೆ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ. ಇದರಿಂದಾಗಿ ಇರಾನ್ ವಿರುದ್ಧ ಸೆಡ್ಡು ಹೊಡೆಯಲು ಇಸ್ರೇಲ್ ಸಿದ್ಧತೆ ನಡೆಸಿದೆ. ಇದರಿಂದಾಗಿ ಕೊಲ್ಲಿ ರಾಷ್ಟ್ರಗಳಲ್ಲಿ ಕಚ್ಚಾ ತೈಲ ಉತ್ಪಾದನೆ ಹಾಗೂ ಇತರೆ ದೇಶಗಳಿಗೆ ಪೂರೈಕೆಯಾಗುವ ಆತಂಕ ಎದುರಾಗಿದೆ.
ಇಂತಹ ಪರಿಸ್ಥಿತಿ ಬಂದರೆ ಎಲ್ಲ ದೇಶಗಳಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಹಲವು ಪಟ್ಟು ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ (Petrol, diesel prices) ಸಾಧ್ಯತೆ ಇದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಭೌಗೋಳಿಕ ರಾಜಕೀಯದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದರೂ, ಜಗತ್ತಿನಲ್ಲಿ ಕಚ್ಚಾ ತೈಲದ ಕೊರತೆ ಇಲ್ಲ. ಬ್ರೆಜಿಲ್ ಮತ್ತು ಗಯಾನಾ ದೇಶಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕಚ್ಚಾ ತೈಲ ಪೂರೈಕೆ ಮುಂದುವರಿದಿದೆ.
ಆದ್ದರಿಂದ ಕಚ್ಚಾ ತೈಲದ ನಿರಂತರ ಪೂರೈಕೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಅಲ್ಲದೆ. ಈ ಹಿಂದಿನಂತೆ ಪರ್ಯಾಯ ಅವಕಾಶಗಳನ್ನು ಗುರುತಿಸಿ ಭಾರತ ಯಾವುದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಭರವಸೆ ಇದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ (Petrol Diesel Rates) ಯಾವುದೇ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಬೆಲೆ ಕಡಿಮೆಯಾಗುವ ಭರವಸೆಯೂ ಇದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದ್ದಾರೆ.
Petrol, diesel prices likely to drop, Says Union Minister Hardeep Singh Puri