ರೈತರ ಖಾತೆಗೆ ₹2,000 ಯಾವಾಗ? ಪಿಎಂ ಕಿಸಾನ್ ಯೋಜನೆಯ ಹೊಸ ಅಪ್‌ಡೇಟ್

ದೇಶದ ಕೋಟ್ಯಾಂತರ ರೈತರು ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಜಮಾ ಆಗುವ ನಿರೀಕ್ಷೆಯಲ್ಲಿ ಇದ್ದಾರೆ. ಸರ್ಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸದಿದ್ದರೂ ಜೂನ್-ಜುಲೈ ನಡುವೆ ಬಿಡುಗಡೆಯ ಸಾಧ್ಯತೆ ಚರ್ಚೆಯಾಗುತ್ತಿದೆ.

ದೇಶದ ಕೋಟ್ಯಂತರ ರೈತರು ಇದೀಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23ನೇ ಕಂತಿನ ಹಣಕ್ಕಾಗಿ ಎದುರು ನೋಡುತ್ತಿದ್ದಾರೆ. ಕಳೆದ ಮಾರ್ಚ್‌ನಲ್ಲಿ 22ನೇ ಕಂತು ಬಿಡುಗಡೆಯಾದ ಬಳಿಕ, ಮುಂದಿನ ಕಂತಿನ ಬಗ್ಗೆ ಚರ್ಚೆಗಳು ಹೆಚ್ಚಾಗಿವೆ.

ಪ್ರತಿ ಕಂತಿನಲ್ಲಿ ರೈತರ ಖಾತೆಗೆ ₹2,000 ಜಮೆಯಾಗುವ ಕಾರಣ ಈ ಯೋಜನೆಗೆ ವಿಶೇಷ ಮಹತ್ವವಿದೆ. ಕೃಷಿ ಚಟುವಟಿಕೆಗಳಿಗೆ ನೆರವಾಗುವ ಈ ಮೊತ್ತಕ್ಕಾಗಿ ಫಲಾನುಭವಿಗಳು ನಿರೀಕ್ಷೆಯಿಂದ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ಕೇಂದ್ರ ಸರ್ಕಾರ ಜೂನ್ ತಿಂಗಳಲ್ಲಿ ಕಂತು ಬಿಡುಗಡೆ ಮಾಡುವ ಪದ್ಧತಿಯನ್ನು ಅನುಸರಿಸುತ್ತಿದೆ. ಇದೇ ಕಾರಣಕ್ಕೆ ಈ ಬಾರಿ ಕೂಡ ಜೂನ್ ಅಥವಾ ಜುಲೈ ತಿಂಗಳಲ್ಲಿ 23ನೇ ಕಂತು ಬಿಡುಗಡೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ.

ಆದರೆ ಈವರೆಗೆ ಕೇಂದ್ರ ಸರ್ಕಾರದಿಂದ ಅಧಿಕೃತ ದಿನಾಂಕ ಘೋಷಣೆ ಆಗಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಿಂತ ಅಧಿಕೃತ ಪ್ರಕಟಣೆಯನ್ನೇ ರೈತರು ನಂಬುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಿದ್ದಾರೆ.

ರೈತರು ತಮ್ಮ ಕಂತಿನ ಸ್ಥಿತಿಯನ್ನು ತಿಳಿಯಲು ಪಿಎಂ ಕಿಸಾನ್ ಪೋರ್ಟಲ್‌ಗೆ ಭೇಟಿ ನೀಡಿ ‘Beneficiary Status’ ಆಯ್ಕೆಯನ್ನು ಬಳಸಬಹುದು. ಆಧಾರ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ಮಾಹಿತಿಯ ಮೂಲಕ ಪಾವತಿ ಸ್ಥಿತಿಯನ್ನು ಸುಲಭವಾಗಿ ಪರಿಶೀಲಿಸಬಹುದು.

ಯೋಜನೆಯ ಹಣ ಪಡೆಯಲು ಇ-ಕೆವೈಸಿ ಹಾಗೂ ಭೂ ದಾಖಲೆಗಳ ಮಾಹಿತಿ ಸರಿಯಾಗಿರುವುದು ಅಗತ್ಯ. ದಾಖಲೆಗಳಲ್ಲಿ ದೋಷಗಳಿದ್ದರೆ ಹಣ ಜಮೆಯಾಗುವಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.

TRENDING ARTICLES1 / 3
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories