ರೈತರ ಬ್ಯಾಂಕ್ ಖಾತೆಗೆ 2000 ರೂಪಾಯಿ ಜಮಾ! ಕೇಂದ್ರ ಸರ್ಕಾರ ಬಿಗ್ ಅಪ್ಡೇಟ್

ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಆಧಾರ್ ಲಿಂಕ್ ಇಲ್ಲದ ಖಾತೆಗಳಿಗೆ ಹಣ ಜಮೆಯಾಗುವುದಿಲ್ಲ.

ಪಿಎಂ ಕಿಸಾನ್ ಯೋಜನೆಯಡಿ ಹಣ ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ಮಹತ್ವದ ಸೂಚನೆ ನೀಡಿದೆ. ಮುಂದಿನ 23ನೇ ಕಂತಿನ ಹಣವನ್ನು ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ ಎಂದು ತಿಳಿಸಲಾಗಿದೆ. ಈ ಪ್ರಕ್ರಿಯೆ ಮಾಡದಿದ್ದರೆ ರೈತರ ಖಾತೆಗೆ ಹಣ ಜಮೆಯಾಗದೇ ಇರಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಇತ್ತೀಚೆಗೆ 22ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಕಾರ್ಯಕ್ರಮದ ವೇಳೆ ನೇರವಾಗಿ ಬಟನ್ ಒತ್ತುವ ಮೂಲಕ ಹಣ ಬಿಡುಗಡೆ ಮಾಡಿದ್ದರು. ಈಗ ರೈತರು ಮುಂದಿನ ಕಂತಿನ ನಿರೀಕ್ಷೆಯಲ್ಲಿದ್ದು, ಜೂನ್ ಅಥವಾ ಜುಲೈ ವೇಳೆಗೆ 23ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಲಾಭಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಡಿಬಿಟಿ (Direct Benefit Transfer) ಮೂಲಕ ಹಣ ನೇರವಾಗಿ ಖಾತೆಗೆ ಜಮೆಯಾಗುವುದರಿಂದ ದಾಖಲೆಗಳು ಸರಿಯಾಗಿರುವುದು ಅತ್ಯಗತ್ಯವಾಗಿದೆ.

ಇ-ಕೆವೈಸಿ ಪೂರ್ಣಗೊಳಿಸಲು ರೈತರಿಗೆ ಮೂರು ಮಾರ್ಗಗಳನ್ನು ನೀಡಲಾಗಿದೆ. ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ ಮೂಲಕ ಸ್ವತಃ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಮೊಬೈಲ್ ಆಪ್ ಮೂಲಕವೂ ಇದನ್ನು ಮಾಡಬಹುದು. ಇಲ್ಲವಾದರೆ ಸಮೀಪದ ಕಾಮನ್ ಸರ್ವಿಸ್ ಸೆಂಟರ್‌ಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬಹುದು.

ಇದರ ಜೊತೆಗೆ ಅನರ್ಹ ಫಲಾನುಭವಿಗಳ ವಿರುದ್ಧವೂ ಕೇಂದ್ರ ಸರ್ಕಾರ ಕ್ರಮ ಮುಂದುವರಿಸಿದೆ. 2019ರ ಫೆಬ್ರವರಿ 1 ನಂತರ ಕೃಷಿ ಭೂಮಿ ಖರೀದಿಸಿದವರಿಗೆ ಯೋಜನೆ ಅನ್ವಯಿಸುವುದಿಲ್ಲ. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ದೊರೆಯುತ್ತದೆ.

ಆದಾಯ ತೆರಿಗೆ ಪಾವತಿಸುವ ಕೆಲವರು ಕೂಡ ಯೋಜನೆಯ ಲಾಭ ಪಡೆಯುತ್ತಿರುವುದು ಪತ್ತೆಯಾಗಿದ್ದು, ಅಂತಹವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಮರುಪರಿಶೀಲನೆ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು, ಫಲಾನುಭವಿಗಳ ಸಂಖ್ಯೆಯಲ್ಲೂ ಇಳಿಕೆ ಕಂಡುಬರುತ್ತಿದೆ.

ರೈತರು ಯಾವುದೇ ವಿಳಂಬ ಮಾಡದೇ ಇ-ಕೆವೈಸಿ ಪೂರ್ಣಗೊಳಿಸಿದರೆ ಮಾತ್ರ ಮುಂದಿನ ಕಂತಿನ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Stories