India News

ಡೊನಾಲ್ಡ್ ಟ್ರಂಪ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಭಾರತದ ಪ್ರಧಾನಿ ನರೇಂದ್ರ ಮೋದಿ (Pm Modi ) ಅವರು ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಅಭಿನಂದಿಸಿದರು (Wishes). ಐತಿಹಾಸಿಕ ಗೆಲುವು ಪಡೆದ ನನ್ನ ಗೆಳೆಯನಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅಧಿಕಾರಾವಧಿಯ ಸಾಧನೆಗಳನ್ನು ಆಧರಿಸಿ, ಭಾರತ ಮತ್ತು ಯುಎಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಂಬಂಧವನ್ನು ಪುನಶ್ಚೇತನಗೊಳಿಸಲು ನಾನು ಎದುರು ನೋಡುತ್ತಿದ್ದೇನೆ.

ಡೊನಾಲ್ಡ್ ಟ್ರಂಪ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಜನರ ಅಭಿವೃದ್ಧಿ, ಸಮೃದ್ಧಿ, ವಿಶ್ವ ಶಾಂತಿ ಮತ್ತು ಸ್ಥಿರತೆಗಾಗಿ ಒಟ್ಟಾಗಿ ಕೆಲಸ ಮಾಡೋಣ. ಎಂದು ಅವರು ಟ್ವೀಟ್ ಮಾಡಿದ್ದಾರೆ, ಈ ಟ್ವೀಟ್‌ಗಾಗಿ ಮೋದಿ ಈ ಹಿಂದೆ ಇಬ್ಬರೂ ಒಟ್ಟಿಗೆ ಇರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಟ್ವೀಟ್ ವೈರಲ್ ಆಗಿದೆ.

ಮತ್ತೊಂದೆಡೆ, ಚುನಾವಣಾ ಫಲಿತಾಂಶಗಳಿಗೆ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ, ಇದು ಅಮೆರಿಕದ ಇತಿಹಾಸದಲ್ಲಿ ಸುವರ್ಣಯುಗವಾಗಲಿದೆ. ಈ ಮಹಾನ್ ಗೆಲುವು ಅಮೆರಿಕದ ಜನತೆಗೆ ಸೇರಿದ್ದು, ಇದರೊಂದಿಗೆ ಅಮೆರಿಕವನ್ನು ಮತ್ತೊಮ್ಮೆ ಉನ್ನತ ಸ್ಥಾನಕ್ಕೇರಿಸುವ ಅವಕಾಶ ಒದಗಿ ಬಂದಿದೆ ಎಂದರು.

Pm Modi Congratulates Friend Donald Trump On Historic Election Victory

Our Whatsapp Channel is Live Now 👇

Whatsapp Channel

Related Stories